ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
ದಾವಣಗೆರೆ, 30 ನವೆಂಬರ್ (ಹಿ.ಸ.) : ಆ್ಯಂಕರ್ : 2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ 7 ರಂದು ದಾವಣಗೆರೆ ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ಹಾಗೂ ಅಪರಾಹ್ನ 2 ರಿಂದ 4.30 ರವರೆಗೆ 2ನೇ ಅಧಿವೇಶನ ನಡೆಯುತ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ


ದಾವಣಗೆರೆ, 30 ನವೆಂಬರ್ (ಹಿ.ಸ.) :

ಆ್ಯಂಕರ್ : 2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ 7 ರಂದು ದಾವಣಗೆರೆ ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ಹಾಗೂ ಅಪರಾಹ್ನ 2 ರಿಂದ 4.30 ರವರೆಗೆ 2ನೇ ಅಧಿವೇಶನ ನಡೆಯುತ್ತದೆ. ಒಟ್ಟು 9654 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande