
ಗದಗ, 30 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಮೇದಾರ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ಅನುಷ್ಠಾನ ಸಮಿತಿಯ ಸರ್ಕಾರ ಜಾರಿಗೆ ತರುವ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ನಾಮ ನಿರ್ದೇಶಿತ ಸದಸ್ಯರನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುತ್ತಿದ್ದು, ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಮೇದಾರ ಅಲೆಮಾರಿ ಸಮುದಾಯಗಳ ಅಭ್ಯರ್ಥಿಗಳು, ಅರ್ಜಿಯ ಪ್ರತಿಯನ್ನು ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿ ಅರ್ಜಿ ಪ್ರತಿಯನ್ನು ಪಡೆದು ಅರ್ಜಿಯೊಂದಿಗೆ ಫೋಟೋ-2, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ರೇಶನ್ ಕಾರ್ಡನ್ನು ಲಗತ್ತಿಸಿ ಅರ್ಜಿಗಳನ್ನು ಡಿ.12 ರೊಳಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಗದಗ ಜಿಲ್ಲಾಡಳಿತ ಭವನ ರೂಮ್ ನಂ:107 ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗದಗ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಮೇದಾರ ಸಮುದಾಯದ, ಅಭ್ಯರ್ಥಿಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP