
ಗದಗ, 30 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ನಗರ ಆರೋಗ್ಯ ಕೇಂದ್ರ ರೆಹಮತ್ ನಗರ, ಜಿಲ್ಲಾ ತಂಬಾಕು ನಿಯಂತ್ರಣಕೋಶ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಗಂಗಾಪುರ ಪೇಟೆಯಲ್ಲಿಂದು ಏರ್ಪಡಿಸಿದ್ದ ತಂಬಾಕು ಯುವ ಅಭಿಯಾನ 0.3 ಅಂಗವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ಹಾನಿಕಾರಕಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ರಾಜೇಂದ್ರ ಎಸ್ ಗಡಾದ ಅವರು ಉದ್ಘಾಟಿಸಿದರು
ಗಂಗಾಪುರ ಪೇಟೆಯಲ್ಲಿ ಏರ್ಪಡಿಸಿದ್ದ ತಂಬಾಕು ಯುವ ಅಭಿಯಾನ 0.3 ಉದ್ಘಾಟಿಸಿ ಮಾತನಾಡಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ ಮಾಡುವುದರಿಂದ ಕ್ಯಾನ್ಸರ್ ಸೇರಿದಂತೆ ಹೃದಯ, ಶ್ವಾಸ ಸಂಬಂಧಿ ಇತ್ಯಾದಿ ಮರಣಾಂತಿಕ ಕಾಯಿಲೆಗಳು ಬರುತ್ತವೆ ತಂಬಾಕು ವಸ್ತುಗಳಲ್ಲಿ ಏಳು ಸಾವಿರ ರಾಸಾಯನಿಕ ವಸ್ತುಗಳಿದ್ದು ಪ್ರತಿ ವರ್ಷ ವಿಶ್ವದಾದ್ಯಂತ 60ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪುತ್ತಿದ್ದಾರೆ. ಆದ್ದರಿಂದ ಇಂದೆ ತಂಬಾಕು ಸೇವನೆ ತ್ಯಜಿಸಿ ಆರೋಗ್ಯವಂತ ಜೀವನ ನಡೆಸಿ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ರಾಜೇಂದ್ರ ಎಸ್ ಗಡಾದ ಅವರು ಹೇಳಿದರು
ತಂಬಾಕು ಉತ್ಪನ್ನಗಳ ಸೇವನೆಯಿಂದ ಯುವ ಸಮೂಹ ತುಂಬಾ ಹಾನಿಗೊಳಗಾಗುತ್ತಿದೆ ಆದ್ದರಿಂದ ಹದಿಹರೆಯ ಮಕ್ಕಳು ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯನ್ನು ಇಂದೇ ಬಿಟ್ಟು ಆರೋಗ್ಯವಂತ ಜೀವನ ನಡೆಸಲು ಮುಂದಾಗಬೇಕೆಂದು ಕರೆ ನೀಡಿದರು..
ಸಮುದಾಯ ಆರೋಗ್ಯ ಅಧಿಕಾರಿ ಬಸಮ್ಮ ಪೂಜಾರ್ ಮಾತನಾಡಿ 18 ವರ್ಷದೊಳಗಿನ ವ್ಯಕ್ತಿಗೆ ತಂಬಾಕ ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧವಾಗಿದ್ದು ತಂಬಾಕು ಉತ್ಪನ್ನಗಳಿಂದ ಸಾಮಾಜಿಕ ಮತ್ತು ಆರ್ಥಿಕ ಹಾನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಗೊಳ್ಳಬೇಕೆಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆ ವೀಣಾ ಸಂಕಣ್ಣವರ್ ಪ್ರಾರ್ಥಿಸಿದರು, ಆಶಾ ಕಾರ್ಯಕರ್ತೆ ಕವಿತಾ ಮಠದ ಪ್ರಸ್ತಾವಿಕವಾಗಿ ಮಾತನಾಡಿದರು, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಬುಗುಟಿ ಸರ್ವರನ್ನು ಸ್ವಾಗತಿಸಿದರು, ಮಂಜುಳಾ ಬೆಟಗೇರಿ ಕಾರ್ಯಕ್ರಮ ನಿರೂಪಿಸಿದರು, ಆಶಾ ಕಾರ್ಯಕರ್ತೆ ಅನ್ನಪೂರ್ಣ ದಲಬಂಜನ್ ವಂದಿಸಿದರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP