ಮರಾಠಾ ಸಮಾಜದ ಬಂಧುಗಳು ಒಂದಾಗಲು ಕಾಲ ಕೂಡಿ ಬಂದಿದೆ : ಸಚಿವ ಲಾಡ್
ಬೀದರ್, 30 ನವೆಂಬರ್ (ಹಿ.ಸ.) : ಆ್ಯಂಕರ್ : ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಕರೆ ನೀಡಿದರು. ಬೀದರ್ ನ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ
Lad


ಬೀದರ್, 30 ನವೆಂಬರ್ (ಹಿ.ಸ.) :

ಆ್ಯಂಕರ್ : ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಕರೆ ನೀಡಿದರು.

ಬೀದರ್ ನ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ಕಾರ್ಯಕ್ರಮ ವಿಶೇಷವಾಗಿದೆ. ಬೀದರ್‌ಗೆ ಹಲವಾರು ಬಾರಿ ಬಂದಿದ್ದೆ. ಆಗ ನಮ್ಮ ಸಮಾಜದ ಮುಖಂಡರು ಸಂಘಟನೆ ಮಾಡಬೇಕು, ಸಮಾಜವನ್ನು ಒಂದು ಗೂಡಿಸಬೇಕು ಎಂದು ಮಾತನಾಡಿದ್ದೇವೆ ಈಗ ಕಾಲ ಕೂಡಿ ಬಂದಿದೆ. ಸಮಾಜದ ಎಲ್ಲಾ ಮುಖಂಡರು ಶ್ರದ್ಧೆಯಿಂದ ಕಷ್ಟ ಬಿದ್ದು ಸಮಾಜದ ಬಂಧುಗಳನ್ನು ಸೇರಿಸಿದ್ದೀರಾ. ಇದಕ್ಕಾಗಿ ನಿಮಗೆ ಧನ್ಯವಾದಗಳು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು ಇಡೀ ವಿಶ್ವದಲ್ಲೇ ಜಾತ್ಯತೀತ ನಾಯಕರಾಗಿದ್ದರು. ಅವರು ಮೊಘಲರ ವಿರುದ್ಧವಿದ್ದರು. ಮುಸ್ಲಿಮರ ವಿರುದ್ಧ ಅಲ್ಲ. ಇದನ್ನು ನಾವು ತಿಳಿಯಬೇಕು ಎಂದರು.

ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ತನ್ನಿಂತಾನೆ ಬರುತ್ತೆ. ಅದಕ್ಕೆ ನಾವು ಇಂದು ನಿರ್ಧಾರ ಮಾಡೋಣ. ಇಂದು ಪ್ರಮಾಣ ಮಾಡೋಣ. ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧೀ ಆಗಲಿದೆ ಎಂದು ಹೇಳಿದರು.

ಇಡೀ ಬೀದರ್‌ ಜಿಲ್ಲೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಮರಾಠ ಸಮಾಜದವರು ಇದ್ದಾರೆ. ನಾವು ಎಲ್ಲಾ ಸಮಾಜದ ಬಂಧುಗಳ ಜೊತೆಗೆ ಸಾಮರಸ್ಯದಿಂದ, ಅಣ್ಣ ತಮ್ಮಂದಿರಂತೆ ಬಾಳೋಣ. ಛತ್ರಪತಿ ಶಿವಾಜಿ ಮಹಾರಾಜರು, ಶಾಹು ಹಾಗೂ ಗಾಯಕ್ವಾಡ್‌ ಮಹಾರಾಜರು ಹೇಳಿದ ಮಾರ್ಗವನ್ನು ಅನುಸರಿಸೋಣ. ಮುಂದಿನ ದಿನಗಳಲ್ಲಿ ಟ್ರಸ್ಟ್‌ ಮೂಲಕ ಅಂಬೇಡ್ಕರ್‌ ಹಾಗೂ ಬಸವಣ್ಣವರ ವಿಚಾರವನ್ನು ತಿಳಿಸೋಣ ಎಂದು ವಿವರಿಸಿದರು.

ನಾವೆಲ್ಲ ಇಲ್ಲಿ ಸೇರಿರುವ ಉದ್ದೇಶವೇ ಸಮಾಜವನ್ನು ಕಟ್ಟಬೇಕು. ಬಡ ಸಮಾಜ ಬಂಧುಗಳನ್ನು ಹುಡುಕಬೇಕು, ಅವರನ್ನು ಓದಿಸಬೇಕು. ಅವರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ನಾವೆಲ್ಲ ಈಗ ಒಂದಾಗಿದ್ದೇವೆ. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ. ನಾಲ್ಕು ಬಾರಿ ಶಾಸಕನಾಗಿ ಸಚಿವನಾಗಿದ್ದೇನೆ. ನನಗೆ ದೇವರು ಒಂದು ಅವಕಾಶ ನೀಡಿದ್ದಾನೆ. ನಮ್ಮ ಸಮಾಜದ ಜೊತೆಗೆ ರಾಜ್ಯದಲ್ಲಿನ ಎಲ್ಲಾ ಶೋಷಿತ ಸಮಾಜದ ಬಂಧುಗಳಿಗೂ ಒಳ್ಳೆಯದಾಗಬೇಕು ಎಂಬುದೇ ನನ್ನ ಅಭಿಲಾಷೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande