ಆಧುನಿಕ ಕೃಷಿ ಯಂತ್ರೋಪಕರಣ ಕುರಿತ ತರಬೇತಿ
ವಿಜಯಪುರ, 30 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಆಧುನಿಕ ಕೃಷಿ ಯಂತ್ರೋಪಕರಣಗಳು ಕುರಿತು ಡಿಸೆಂಬರ್ 8 ರಿಂದ 10ರವರೆಗೆ ಮೂರು ದಿವಸದ ತರಬೇತಿಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಡಿ.0
ಆಧುನಿಕ ಕೃಷಿ ಯಂತ್ರೋಪಕರಣ ಕುರಿತ ತರಬೇತಿ


ವಿಜಯಪುರ, 30 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಆಧುನಿಕ ಕೃಷಿ ಯಂತ್ರೋಪಕರಣಗಳು ಕುರಿತು ಡಿಸೆಂಬರ್ 8 ರಿಂದ 10ರವರೆಗೆ ಮೂರು ದಿವಸದ ತರಬೇತಿಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಡಿ.06ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿಯಾದ ಗೀತಾ ಭಜಂತ್ರಿ (ಮೊ: 9986054750) ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande