ರಾಯಚೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ
ರಾಯಚೂರು, 30 ನವೆಂಬರ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವ
ರಾಯಚೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ


ರಾಯಚೂರು, 30 ನವೆಂಬರ್ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2025-26ನೇ ಸಾಲಿನ ಗುರಿ - ಒಲಂಪಿಕ್ ಪದಕ, 2023 ಮತ್ತು 2024ನೇ ಸಾಲಿನ ನಗದು ಪುರಸ್ಕಾರ, 2025-26ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ಕ್ರೀಡಾ ವಿದ್ಯಾರ್ಥಿ ವೇತನ ಕಾರ್ಯಕ್ರಮಗಳಿಗೆ ಅರ್ಹ ಇರುವ ಕ್ರೀಡಾಪಟುಗಳು ಇಲಾಖೆಯ ವೆಬ್‌ಸೈಟ್ https://sevasindhu.karnataka.gov.in ರ ಮೂಲಕ ಡಿಸೆಂಬರ್ 03ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande