
ವಿಜಯಪುರ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಪತಿ ಹೃದಯಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ತನ್ಮೂಲಕ ಈ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
40 ವರ್ಷದ ಶಶಿಧರ ಪತ್ತಾರ ಎಂಬವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಾವಿನ ಸುದ್ದಿ ತಿಳಿದ ತಕ್ಷಣ ಆಘಾತಕ್ಕೊಳಗಾದ ಪತ್ನಿ 35 ವರ್ಷದ ಸರೋಜಾ ಹೃದಯಾಘಾತದಿಂದ ಅಸುನೀಗಿದ್ದಾರೆ.
ಮುಗಿಲುಮುಟ್ಟಿದ ಆಕ್ರಂದನ
ಹದಿನೈದು ವರ್ಷಗಳ ಹಿಂದೆ ಈ ದಂಪತಿ ಮದುವೆಯಾಗಿದ್ದರು. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ. ಒಂದೇ ಸಮಯದಲ್ಲಿ ಗಂಡ ಹೆಂಡತಿ ಮೃತಪಟ್ಟಿದ್ದರಿಂದ ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande