ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಗೆ ಅರ್ಜಿ : ಅವಧಿ ವಿಸ್ತರಣೆ
ರಾಯಚೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ನವೆಂಬರ್ 15
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಗೆ ಅರ್ಜಿ : ಅವಧಿ ವಿಸ್ತರಣೆ


ರಾಯಚೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಲಾಗಿದೆ.

ನಾವೀನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 05ರಿಂದ 18ವರ್ಷ ವಯೋಮಿತಿಯ ಮಕ್ಕಳ ಸಾಧನೆಯನ್ನು ಗುರುತಿಸಿ ಪೆÇ್ರೀತ್ಸಾಹಿಸಲಾಗುತ್ತದೆ.

ಆಸಕ್ತ ಅರ್ಜಿಸಲ್ಲಿಸುವ ಮಗು ಅರ್ಜಿ ನಮೂನೆಯೊಂದಿಗೆ ಇತ್ತೀಚಿನ ಭಾವಚಿತ್ರ ಲಗತ್ತಿಸಬೇಕು. ಅಸಾಧಾರಣಾ ಪ್ರತಿಭೆ ಹೊಂದಿರುವ ಬಗ್ಗೆ ಪತ್ರಿಕಾ ಪ್ರಕಟಣೆಯ ತುಣುಕು/ ಪ್ರಮಾಣ ಪತ್ರ ಲಗತ್ತಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ಉಪ ನಿರ್ದೇಶಕರ ಕಚೇರಿ ಮಂತ್ರಾಲಯ ರೋಡ್ ಐ.ಡಿ.ಎಸ್.ಎಮ್.ಟಿ ಲೇಜೌಟ್ ಎದುರುಗಡೆ ರಾಯಚೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ: 08532295646ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande