ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ
ರಾಯಚೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲದ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಜೈನ್, ಸಿಖ್ಖ್, ಪಾರ್ಸಿ ಅಲ್ಪಸಂಖ್ಯಾತ ಸಮುದಾಯದ ವಿಧ್ಯಾರ್ಥಿಗಳಿಂದ
ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ


ರಾಯಚೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲದ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಜೈನ್, ಸಿಖ್ಖ್, ಪಾರ್ಸಿ ಅಲ್ಪಸಂಖ್ಯಾತ ಸಮುದಾಯದ ವಿಧ್ಯಾರ್ಥಿಗಳಿಂದ ಅರಿವು ರಿನ್ಯೂವಲ್ ಸಿಇಟಿ, ನೀಟ್ ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ (ಎಂ.ಬಿ.ಬಿ.ಎಸ್ ಎಂ.ಡಿ.ಎಸ್), ದಂತ ವೈದ್ಯಕೀಯ (ಬಿ.ಡಿಎಸ್, ಎಂ.ಡಿ.ಎಸ್) (ಬಿ.ಆಯುಷ್, ಎಂ ಆಯುಷ್), ಇಂಜಿನಿಯರಿಂಗ್,&ಟೆಕ್ನಾಲಜಿ ಬಿ.ಇ/ಬಿ.ಟೆಕ್, ಎಂ.ಇ.ಎಂ.ಟೆಕ್) ಬ್ಯಾಚುಲರ್ ಆಫ್ ಆರ್ಕಿಕ್ಟರ್ ಇಂತಹ ಕೋರ್ಸಗಳ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: kmdconline.karnataka.gov.in ನಲ್ಲಿ ಡಿಸೆಂಬರ್ 03ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ನಂ.12-11-49,1 ನೇ ಮಹಡಿ ಅಮೀರ ಟ್ರೇಡಿಂಗ್ ಕಾಂಪ್ಲೆಕ್ಸ್, ಅರಬ್ ಮೋಹಲ್ಲಾ ರಾಯಚೂರು ದೂರವಾಣಿ ಸಂಖ್ಯೆ: 08532 250825ಗೆ ಸಂಪರ್ಕ ಮಾಡಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande