ಅರಿವು ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಕೊಪ್ಪಳ, 04 ನವೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕೊಪ್ಪಳ ಜಿಲ್ಲೆ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿ
ಅರಿವು ಸಾಲ ಯೋಜನೆಯಡಿ ಅರ್ಜಿ ಆಹ್ವಾನ


ಕೊಪ್ಪಳ, 04 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕೊಪ್ಪಳ ಜಿಲ್ಲೆ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್, ಡಿ.ಸಿ.ಇ.ಟಿ, ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS), ದಂತ ವೈದ್ಯಕೀಯ (BDS, MDS), , ಆಯುಷ್ (B.Ayush, M.Ayush), , ಇಂಜಿನಿಯರಿಂಗ್ & ಟೆಕ್ನಾಲಜಿ (B.E/ B.Tech/ M.E/ M.Tech), ¨ÁåZÀÄ®gï D¥sï DQðmÉPÀÑgï (B.Arch/ M.Arch) MBA, MCA, LLB,, B.Sc in Horticulture, Agricultural Engg, Dairy Technology, Forestry,Veternary and Animal Sciences, Fisheries, Sericulture. Home/ Community Sciences, Food Nutrition and Dietetics, B.Pharma, M.Pharma, Pharma.D, AndD.Pharma ಗಳಲ್ಲಿ ಆಯ್ಕೆಯಾದಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಬೇಕಾಗಿರುತ್ತದೆ. (ಶೇ.12 ರಷ್ಟು ಮೊತ್ತವನ್ನು ಆನ್‍ಲೈನ್ ಮುಖಾಂತರ ಪಾವತಿಸಬಹುದು). ಅರ್ಜಿಯನ್ನು ವೆಬ್ ಸೈಟ್: kmdconline.karnataka.gov.in ಮೂಲಕ ಡಿಸೆಂಬರ್ 3 ರೊಳಗೆ ಸಲ್ಲಿಸಬೇಕು.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ ಕೊಪ್ಪಳ–583231. ದೂರವಾಣಿ ಸಂಖ್ಯೆ; 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande