
ಬಳ್ಳಾರಿ, ,04 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ಕ್ರೀಡೆ, ಕಲೆ, ಸಾಂಸ್ಕ್ರತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆಯ ಅವಧಿಯನ್ನು ನ.15 ರ ವರೆಗೆ ವಿಸ್ತರಿಸಲಾಗಿದೆ.
ಮಕ್ಕಳು 5 ರಿಂದ 18 ವರ್ಷ ವಯೋಮಿತಿ ಒಳಗಿರಬೇಕು. ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಹೊಂದಿರಬೇಕು. ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿದ ಪ್ರತಿ ಲಗತ್ತಿಸಬೇಕು. ಪ್ರತಿಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನಪ್ರತಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು, ಪ್ರಮಾಣ ಪತ್ರ ಲಗತ್ತಿಸಬೇಕು.
ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಮಾಹಿತಿ ಇರಬೇಕು. ಹಿಂದಿನ ವರ್ಷಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಅರ್ಜಿದಾರರು ಬಳ್ಳಾರಿ ಜಿಲ್ಲೆಯಲ್ಲಿ ನೆಲಸಿರಬೇಕು. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲೆಗಳನ್ನು ಸಲ್ಲಿಸಬೇಕು.
ಪ್ರಶಸ್ತಿಯು ರೂ.10,000 ಗಳ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಪಡೆದು ಕನ್ನಡ ಭಾಷೆಯಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅರ್ಜಿಗಳನ್ನು ನ.15 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್