ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಅಶೋಕ ವಾಗ್ದಾಳಿ
ಬೆಂಗಳೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ, ಯಾಕೆ ಪ್ರಯೋಜನವಿಲ್ಲ ಅಂದರೆ
Ashok


ಬೆಂಗಳೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ, ಯಾಕೆ ಪ್ರಯೋಜನವಿಲ್ಲ ಅಂದರೆ 38 ಗ್ರಾಮಗಳಿಗೆ ಬಸ್ಸೇ ಇಲ್ಲ, ಬಸ್ಸು ಯಾಕಿಲ್ಲ ಅಂದರೆ ಅಲ್ಲಿ ಯೋಗ್ಯ ರಸ್ತೆಯೇ ಇಲ್ಲ ಎಂದು ಆರೋಪಿಸಿದ್ದಾರೆ.

ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ತಮಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ತಮಗೆ ಕಾಣುತ್ತಿಲ್ಲವೇ ಪ್ರಿಯಾಂಕ್ ಖರ್ಗೆ ಅವರೇ ಎಂದು ಪ್ರಶ್ನಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ.

ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನ ಮತ್ತು ಕಾಂಗ್ರೆಸ್ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande