
ಬಳ್ಳಾರಿ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರಸ್ತಕ ಸಾಲಿನ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಲು ಮಕ್ಕಳಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸ್ಪರ್ಧೆಗಳು :
ಸೃಜನಾತ್ಮಕ ಕಲೆ: ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ.
ಸೃಜನಾತ್ಮಕ ಬರವಣಿಗೆ: ಕಥೆ, ಕವನ, ಪ್ರಬಂಧ ಬರೆಯುವುದು.
ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ ಸೇರಿದಂತೆ ಯಾವುದಾದರೊಂದು ಕಲೆಯನ್ನು ವಿಷಯದ ಬಗ್ಗೆ ಪ್ರದರ್ಶಿಸಲು ಅವಕಾಶವಿರುತ್ತದೆ.
ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ನೀಡುವುದು.
ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ಮೇಲಿನ ಯಾವುದೇ ಪ್ರಕಾರದಲ್ಲಿ ಭಾಗವಹಿಸಬಹುದು. 09 ರಿಂದ 16 ವರ್ಷದೊಳಗಿನ ಆಸಕ್ತಿಯುಳ್ಳ ಸರ್ಕಾರಿ ಶಾಲೆ ಮಕ್ಕಳು, ಗ್ರಾಮೀಣ ಪ್ರದೇಶ ಮಕ್ಕಳು ನೋಂದಾಯಿಸಿಕೊಳ್ಳಬಹುದು. ಸೌಲಭ್ಯ ವಂಚಿತ ಮಕ್ಕಳಿಗೆ ಸುಧಾರಣಾ ಸಂಸ್ಥೆಗಳ ಬಾಲಕರು, ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ ಮೊದಲನೇ ಆದ್ಯತೆ ನೀಡಲಾಗುವುದು.
ಮಕ್ಕಳ ಹೆಸರು ನೋಂದಾಯಿಸಿದವರಿಗೆ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನೋಂದಾಯಿಸಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು. ನ.10 ಕೊನೆಯ ದಿನವಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-266219, ಮೊ.9741965198 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್