ಪ್ರತಿಯೊಬ್ಬರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ : ಜಿಪಂ ಸಿಇಓ ಸಲಹೆ
ರಾಯಚೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ಇಂದಿನ ಆಧುನೀಕತೆಯ ಒತ್ತಡದ ಜೀವನ ಶೈಲಿಯಿಂದಾಗಿ ನಗರ, ಗ್ರಾಮೀಣ ಎನ್ನದೆ ಎಲ್ಲಡೆ ಕಂಡು ಬರುತ್ತಿರುವ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್‍ನಂತಹ ಕಾಯಿಲೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಯಮಿತ ಆರೋಗ್ಯ ತಪಾಸಣೆಗೆ
ಪ್ರತಿಯೊಬ್ಬರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ: ಜಿಪಂ ಸಿಇಓ ಸಲಹೆ


ಪ್ರತಿಯೊಬ್ಬರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ: ಜಿಪಂ ಸಿಇಓ ಸಲಹೆ


ರಾಯಚೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಇಂದಿನ ಆಧುನೀಕತೆಯ ಒತ್ತಡದ ಜೀವನ ಶೈಲಿಯಿಂದಾಗಿ ನಗರ, ಗ್ರಾಮೀಣ ಎನ್ನದೆ ಎಲ್ಲಡೆ ಕಂಡು ಬರುತ್ತಿರುವ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್‍ನಂತಹ ಕಾಯಿಲೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಯಮಿತ ಆರೋಗ್ಯ ತಪಾಸಣೆಗೆ ಮತ್ತು ವ್ಯಾಯಾಮಕ್ಕೆ ಒತ್ತು ಕೊಡವೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್, ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಹಯೋಗದಿಂದ ರಾಷ್ಟೀಯ ಏಕತಾ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ನಡೆದ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅತಿಯಾದ ಕೊಬ್ಬಿನಾಂಶ ಪದಾರ್ಥಗಳ ಬಳಕೆ, ವ್ಯಾಯಾಮದಡೆ ನಿರಾಸಕ್ತಿ, ತಂಬಾಕು, ಆಲ್ಕೋಹಾಲ್‍ನಂತಹ ಪದಾರ್ಥಗಳ ಬಳಕೆಯಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆಯಂತಹ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಈ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆ ಕುರಿತು ಜನಜಾಗೃತಿ ಶಿಬಿರಗಳನ್ನು ನಿರಂತರ ಹಮ್ಮಿಕೊಂಡು ಮೂವತ್ತು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ನಿಯಮಿತ ಆರೋಗ್ಯ ತಪಾಸಣೆ ಕೈಗೊಳ್ಳಬೇಕೆಂದರು.

ಇದೆ ವೇಳೆ, ಸಿಇಓ ಅವರು ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿ ವಿವಿಧ ಪರೀಕ್ಷೆಗಳನ್ನು ಮಾಡಿಸಿಕೊಂಡರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕರಾದ ಶರಣಬಸವರಾಜ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಕಾರ್ಯನಿರ್ವಾಹಕ ಅಭಿಯಂತರರು ಶಿವಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್, ರಿಮ್ಸ್ ಎನ್‍ಸಿಡಿ ಪಿಜಿಷಿಯನ್ ಡಾ.ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಪಂಚಾಯತ ಹಾಗೂ ಎನ್‍ಸಿಡಿ, ಮಾನಸಿಕ ಆರೋಗ್ಯ, ಅಂಧತ್ವ ವಿಭಾಗದ ಅಧಿಕಾರಿ, ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande