
ವಿಜಯಪುರ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ.
ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇತ್ತೀಚೆಗಷ್ಟೇ ಹೆಚ್.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದ H.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ಸ್ಫರ್ಧಿಸಿ ಗೆಲುವಿನ ನಗೆ ಬೀರಿದ್ದರು.ನಾಳೆ ಹುಟ್ಟೂರಲ್ಲಿ ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande