
ಕೊಪ್ಪಳ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಸದಸ್ಯರಾದ ನ್ಯಾ. ಎಸ್.ಕೆ.ವಂಟಿಗೋಡಿ ಅವರು ನವೆಂಬರ್ 6 ಮತ್ತು 7 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಗೌರವಾನ್ವಿತ ಸದಸ್ಯರ ಆಪ್ತ ಸಹಾಯಕರಾದ ರೂಪಾ ಕೆ. ಅವರು ತಿಳಿಸಿದ್ದಾರೆ.
ಅವರು ನವೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಪ್ರಕರಣ ಸಂಖ್ಯೆ: 3095/10/24/2025(ಎಫ್‍ಬಿ) ಗೆ ಸಂಬಂಧಿಸಿದಂತೆ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.
ನವೆಂಬರ್ 7 ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದಿಂದ ನಿರ್ಗಮಿಸಿ 1.30 ಕ್ಕೆ ಗಂಗಾವತಿಗೆ ತೆರಳುವರು. ಗಂಗಾವತಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನದ ಊಟದ ನಂತರ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಸ್ವಯಂ ಪ್ರೇರಿತ ದೂರು ಸಂಖ್ಯೆ: 3950/10/24/2024(ಎಫ್‍ಬಿ) ಗೆ ಸಂಬಂಧಿಸಿದಂತೆ ಗಂಗಾವತಿ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.
ಅಂದು ಸಂಜೆ 6 ಗಂಟೆಗೆ ಗಂಗಾವತಿಯಿಂದ ನಿರ್ಗಮಿಸಿ 7.30 ಕ್ಕೆ ವಿಜಯನಗರದ ವೈಕುಂಠ ಅತಿಥಿಗೃಹಕ್ಕೆ ತೆರಳಿ ವಾಸ್ತವ್ಯ ಮಾಡುವರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್