
ವಿಜಯಪುರ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಮಾವಾ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ.
ಯಮನೂರಿ ಹರನಾಳ ಸೇರಿದಂತೆ ಇನ್ನು ಮೂರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಶಿವಣಗಿ ಗ್ರಾಮದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಮಾವಾ ಮಾರಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು 16 ಸಾವಿರ ಮೌಲ್ಯದ 40 ಗ್ರಾಂದ ಸಣ್ಣ ಪಾಕೆಟ್ 320 ಹಾಗೂ 730 ನಗದು ಜಪ್ತಿಗೈದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande