ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ : ಸಚಿವ ಎಚ್ ಕೆ ಪಾಟೀಲ
ಗದಗ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಗದಗ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಗದಗ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ “ಕರ್ನಾಟಕ ಸಂಭ್ರಮ 52” ಎಂಬ ಶೀರ್ಷಿಕೆಯಲ್ಲಿ ಕನ್ನಡ
ಫೋಟೋ


ಗದಗ, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಗದಗ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಗದಗ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ “ಕರ್ನಾಟಕ ಸಂಭ್ರಮ 52” ಎಂಬ ಶೀರ್ಷಿಕೆಯಲ್ಲಿ ಕನ್ನಡ ನಾಡು ನುಡಿಯ ಕುರಿತು ಸಂಗೀತ ಕಾರ್ಯಕ್ರಮ ಪಂ ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ರವರು ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಕನ್ನಡ ನಾಡು ನುಡಿಯ ಸೊಗಸು, ಅದರ ಸಂಗೀತದ ಸ್ಪಂದನೆ, ನಮ್ಮ ಸಂಸ್ಕೃತಿಯ ಆತ್ಮವಾಗಿದೆ. ರಾಜ್ಯಕ್ಕೆ ಕರ್ನಾಟಕ ನಾಮಕರಣ ಮಾಡಿ 50 ವರ್ಷಸಂದ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಅದ್ದೂರಿಯಾಗಿ ಎರಡು ವರ್ಷಗಳ ಹಿಂದೆ ಆಚರಣೆ ಮಾಡಿದ್ದು ಇದಕ್ಕೆ ತಾವೇಲ್ಲ ಸಾಕ್ಷಿಯಾಗಿದ್ದಿರಿ ಎಂದರು.

ಪ್ರಸ್ತುತ ಕರ್ನಾಟಕ ಸಂಭ್ರಮ 52ರ ಅಂಗವಾಗಿ ನಾವು ಮತ್ತೆ ಕನ್ನಡ ನಾಡು ನುಡಿಯನ್ನು ರಾಗತಾಳದಲ್ಲಿ ರಂಜಿಸೋಣ” ಎಂದು ಹರ್ಷ ವ್ಯಕ್ತಪಡಿಸಿದರು.

“ಹುಯಿಲಗೋಳ ನಾರಾಯಣ, ಪಂಡಿತ್ ಪುಟ್ಟರಾಜ ಗವಾಯಿ, ಗಂಗೂಬಾಯಿ ಹಾನಗಲ್ ಮತ್ತು ಭಾರತ ರತ್ನ ಪಂಡಿತ್ ಭೀಮ್‌ಸೇನ್ ಜೋಶಿ ಮುಂತಾದ ಮಹಾನ್ ಸಂಗೀತ ಪಿತಾಮಹರ ಭೂಮಿಯಾದ ಈ ಗದಗದ ಪುಣ್ಯನಾಡಿನಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಕನ್ನಡದ ಭಾಷೆ, ನೆಲ, ಜಲ, ಸಂಸ್ಕೃತಿಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ,” ಎಂದರು.

ಬೆಳಗಾವಿಯಲ್ಲಿ 1973ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಹುಯಿಲಗೋಳ ನಾರಾಯಣರಾವ್ ರಚಿಸಿದ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಎಂಬ ಗೀತೆಯನ್ನು ಗಂಗೂಬಾಯಿ ಹಾನಗಲ್ ಅವರು ಹಾಡಿ ಜನಮನ ಗೆದ್ದಿದ್ದರು ಎಂಬ ನೆನಪನ್ನೂ ಅವರು ಹಂಚಿಕೊಂಡರು.

ಈ ಸಂದರ್ಭದಲ್ಲಿ ಖ್ಯಾತ ಗಾಯಕಿ ಸಾದ್ವಿನಿ ಕೊಪ್ಪ, ಗಾಯಕ ಡಾ. ಶ್ರೀರಾಮ ಕಾಸರ್, ತಬಲಾ ವಾದಕ ವಿಜಯಕುಮಾರ್, ಕೀಬೋರ್ಡ್ ವಾದಕ ಬಸವರಾಜ್, ರಿದಮ್ ಪ್ಯಾಡ್ ವಾದಕ ನಂದೀಶ್ ಬುವ ಮೊದಲಾದ ಕಲಾವಿದರು ಕನ್ನಡ ನಾಡು ನುಡಿ ಕುರಿತಾದ ಸಂಗೀತ ಕಾರ್ಯಕ್ರಮವನ್ನು ನೀಡಿದರು.

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೋಗೇರಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಧ್ಯಾಪಕ ಬಾಹುಬಲಿ ಜೈನ ನಿರೂಪಣೆ ಮಾಡಿದರು.

ಈ ಸಂದರ್ಭದಲ್ಲಿ ಗದಗ–ಬೆಟಿಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ವಿಭೂತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಾಮಾಂಕಿತ ಸದಸ್ಯ ಸಿದ್ದು ಪಾಟೀಲ, ನಗರಸಭೆ ಸದಸ್ಯರು ಹಾಗೂ ಗಣ್ಯರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande