
ಬೆಂಗಳೂರು, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರು ಕಳೆದ 5-6 ದಿನಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ, ರೈತರು ವಿಷ ಕುಡಿದು ಸಾಯುವ ಅಸಹಾಯಕ ಪರಿಸ್ಥಿಗೆ ದೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿಗಳೆ ರೈತರು ತಮ್ಮ ಕಷ್ಟವನ್ನು ಯಾರ ಬಳಿ ಹೇಳಿಕೊಳ್ಳಬೇಕು? ತಮ್ಮ ಬಳಿಯೋ ಅಥವಾ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿಯೋ ಎಂದು ಪ್ರಶ್ನಿಸಿದ್ದಾರೆ.
ಅಸಲಿಗೆ ನಿಮ್ಮ ಸರ್ಕಾರ ಬದುಕಿದೆಯಾ ಅಥವಾ ಸತ್ತಿದೆಯಾ? ಬೆಳಗಾವಿಯಲ್ಲಿರುವ ನಿಮ್ಮ ಘಟಾನುಘಟಿ ನಾಯಕರುಗಳು, ಅಹಿಂದ ರಾಜಕಾರಣದ ವಾರಸುದಾರರು ಎಲ್ಲಿದ್ದಾರೆ ಸ್ವಾಮಿ? ಬಿಹಾರ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿ ಆಗಿದ್ದಾರಾ? ಅಥವಾ ಯಾವುದಾದರೂ ಬ್ಯಾಂಕಿನ ಚುನಾವಣೆಯಲ್ಲಿ ಬ್ಯುಸಿ ಆಗಿದ್ದಾರಾ? ಅಥವಾ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರಾ?
ನಿಮ್ಮ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ಅನ್ನದಾತರ ಶಾಪ ತಟ್ಟದೇ ಇರದು ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa