ಹಿರಿಯ ಕಾಂಗ್ರೆಸ್ ಶಾಸಕ ಹೆಚ್​.ವೈ. ಮೇಟಿ ನಿಧನ
ಬೆಂಗಳೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಬಾಗಲಕೋಟೆ ಶಾಸಕ ಹೆಚ್​.ವೈ. ಮೇಟಿ (79) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಕೆಲವು ದಿನಗಳಿಂದ ಆರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೇಟಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿ
H.y.meti


ಬೆಂಗಳೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಬಾಗಲಕೋಟೆ ಶಾಸಕ ಹೆಚ್​.ವೈ. ಮೇಟಿ (79) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಕೆಲವು ದಿನಗಳಿಂದ ಆರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೇಟಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

1946ರ ಅಕ್ಟೋಬರ್ 9ರಂದು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಜನಿಸಿದ ಹೆಚ್​.ವೈ. ಮೇಟಿ, ಸ್ಥಳೀಯ ರಾಜಕೀಯ ಮತ್ತು ಸಾರ್ವಜನಿಕ ಸೇವೆಯಲ್ಲಿ ಸಕ್ರಿಯ ಪಾತ್ರವಹಿಸಿದ್ದರು. ಅವರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ರಾಜಕೀಯ ಜೀವನದ ಆರಂಭದಲ್ಲಿ ಮೇಟಿ ಅವರು 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರು. ನಂತರ 1994ರಲ್ಲಿ ಜನತಾ ದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ, ದೇವೇಗೌಡ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದರು.

1996ರಲ್ಲಿ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಗೆಲವು ಸಾಧಿಸಿದ್ದರು.

2008ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮೇಟಿ, ಅದೇ ವರ್ಷ ಬಾಗಲಕೋಟೆಯಿಂದ ಸ್ಪರ್ಧಿಸಿ ಸೋಲು ಕಂಡರೂ, 2013ರಲ್ಲಿ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2023ರಲ್ಲಿ ಬಾಗಲಕೋಟೆಯಿಂದ ಮತ್ತೆ ಗೆಲವು ಸಾಧಿಸಿದ್ದರು.

ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರಾದ ತಿಮ್ಮಾಪುರದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande