ರಾಯಚೂರು : ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು-ಆಯುಕ್ತ ದೇವರಾಜು
ರಾಯಚೂರು, 05 ನವೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರಿನ ಮಹಾನಗರ ಪಾಲಿಕೆಯ ಆಸ್ತಿಗಳಾದ ಕೋಟೆ, ಕಂದಕ, ತೀನ್ ಕಂದೀಲ್ ಸೇರಿದಂತೆ ಇತರೆ ಸ್ಥಳಗಳನ್ನು ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜು ಅವರು ತಿಳಿ
ರಾಯಚೂರು : ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಆಯುಕ್ತ ದೇವರಾಜು


ರಾಯಚೂರು, 05 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರಿನ ಮಹಾನಗರ ಪಾಲಿಕೆಯ ಆಸ್ತಿಗಳಾದ ಕೋಟೆ, ಕಂದಕ, ತೀನ್ ಕಂದೀಲ್ ಸೇರಿದಂತೆ ಇತರೆ ಸ್ಥಳಗಳನ್ನು ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜು ಅವರು ತಿಳಿಸಿದ್ದಾರೆ.

ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಯಚೂರಿನಲ್ಲಿರುವ ಕೋಟೆಯ ಹೊರಗಡೆ ಹಾಗೂ ಒಳಗಡೆ ವಾಸಮಾಡುವ ಮಾಲೀಕರಿಗೆ ಇ-ಖಾತ ವಿತರಿಸುವ ಕುರಿತು ಸಂಬಂಧಿಸಿದಂತೆ 6-8 ತಿಂಗಳಿನಿಂದ ಚರ್ಚೆ ಮಾಡಲಾಗುತ್ತಿದೆ. ಇದಕ್ಕಾಗಿ ಇಲಾಖೆಯ ಕಾನೂನು ರೀತಿಯಲ್ಲಿ ಹೇಗೆ ಪರಿಹಾರ ನೀಡಬೇಕು ಎಂದು ಚರ್ಚೆ ನಡೆಸಲಾಗಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಾಯ ಮೇರಿಗೆ ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ ಎಂದರು.

ಕೋಟೆಯ ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳ ವೀಕ್ಷಣೆ ಮಾಡಲಾಗಿದ್ದು, ಮುಖ್ಯವಾಗಿ ನಗರದ ನವರಂಗ ದರ್ವಾಜ್ ಹಾಗೂ ಪುರತತ್ವ ಇಲಾಖೆಯ ವಸ್ತು ಸಂಗ್ರಹಾಲಯ, ತೀನ್ ಕಂದಿಲ್, ಕಾಸಭಾವಿ, ಅಮ್ ತಲಾಬ್ ಸೇರಿದಂತೆ ರಾಯಚೂರಿನ ಕೋಟೆಯ ಕಂದಕಗಳನ್ನು ವೀಕ್ಷಣೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು 800ಕ್ಕೂ ಹೆಚ್ಚು ರಾಜ್ಯ ಸಂರಕ್ಷಿತ ಸ್ಮಾರಕಗಳು ಇವೆ. ಅದರಲ್ಲಿ ಶೇಕಡ 50ರಷ್ಟು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಂಡುಬರುತ್ತವೆ. ಇವುಗಳ ಸಂಖ್ಯೆ ಅನುಗುಣವಾಗಿ ಇನ್ನೂ ಇಲಾಖೆಯಿಂದ ಆದ್ಯತೆ ನೀಡಬೇಕು. ಅದಕ್ಕಾಗಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕೋಟೆಯಲ್ಲಿ ಪಾಲಿಕೆ ಅನುದಾನದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಅವಕಾಶ ನೀಡಲಾಗುವುದು. ಜೆಸ್ಕಾಂ ಇಲಾಖೆ ಪಕ್ಕದಲ್ಲಿ ಮುಖ್ಯ ಪ್ರವೇಶ ದ್ವಾರ ಮಾಡಲಾಗುತ್ತದೆ. ಅಲ್ಲದೆ ರಸ್ತೆಯ ಪಕ್ಕದಲ್ಲಿ ಕೋಟೆಯ ಚಿತ್ರವನ್ನು ಬಿಡಿಸಿ ಪ್ರವಾಸಿಗರನ್ನು ಆಕರ್ಷಣೆ ಮಾಡಲಾಗುತ್ತದೆ ಎಂದರು.

ಕೆಲವು ಪ್ರದೇಶದವು ಒತ್ತೂರಿಯಾಗಿದ್ದು, ಅಲ್ಲಿ ಶಾಪ್‍ಗಳನ್ನು ನಿರ್ಮಾಣ ಮಾಡಲಾಗಿದೆ. ಶಾಪ್‍ಗಳಿಂದ ಸ್ಮಾರಕ ಆಕರ್ಷಣೆಗೆ ಅಡ್ಡಿಯಾಗಿದೆ. ಪಾಲಿಕೆಯಿಂದ ಹಾಗೂ ಇಲಾಖೆ ವತಿಯಿಂದ ತೆರವು ಕಾರ್ಯ ನಡೆಸಿ, ಸ್ಮಾರಕಗಳನ್ನು ಇನ್ನಷ್ಟು ಆಕರ್ಷಣೆ ಮಾಡಲು ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು ಸಹಕಾರ ನೀಡಬೇಕೆಂದು ಹೇಳಿದರು.

ಈ ವೇಳೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಮಾತನಾಡಿ, ಪುರತತ್ವ ಇಲಾಖೆಯಿಂದ ಪಾಲಿಕೆ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಇಲಾಖೆ ಮುಖ್ಯಸ್ಥರಿಂದ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಲಾಗಿದ್ದು ಅವುಗಳನ್ನು ಮುಂದಿನ ದಿನಗಳಲ್ಲಿ ಪಾಲಿಕೆ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸುತ್ತೋಲೆ ಹಿನ್ನಲೆಯಲ್ಲಿ ಅಧಿಕೃತ ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಪಡೆಯಲು ಅಗತ್ಯ ದಾಖಲಾತಿಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಅಲ್ಲದೆ ಪೌರ ಸುಧಾರಣಾ ಕೋಶದಿಂದ ರಾಷ್ಟ್ರೀಯ ಸೂಚ್ಯಾಂಕ ಕೇಂದ್ರದ ಸಹಯೋಗದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ತಂತ್ರಾಂಶವನ್ನು ಲೋಕಾರ್ಪಣೆ ಮಾಡಲಾಗುವುದು. ಈ ತಂತ್ರಾಂಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅಧಿಕೃತವಲ್ಲದ ಮತ್ತು ಅಕ್ರಮ ಆಸ್ತಿಗಳ ಮಾಹಿತಿಯನ್ನು ದಾಖಲಿಸಲು/ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಇಲಾಖೆಯ ಪ್ರಕರಣ 26ರ ತಿದ್ದುಪಡಿ ಮೂಲ ಅಧಿನಿಯಮದಡಿ ಮೂರು ತಿಂಗಳುಗಳಿಗೆ ಎಂಬ ಪದಗಳ ಬದಲಿಗೆ ಎರಡು ವರ್ಷಗಳವರೆಗೆ ಹಾಗೂ ಎರಡು ಸಾವಿರ ರೂಪಾಯಿಗಳಿಗೆ ಎಂಬ ಪದಗಳ ಬದಲಿಗೆ ಒಂದು ಲಕ್ಷ ರೂಪಾಯಿಗಳಿಗೆ ಎಂಬ ಪದಗಳನ್ನು ಸೇರಿಸಲಾಗಿದ್ದು, ಈ ಬ್ಗಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದೆಂದರು.

ಪಾಲಿಕೆಯ ಪ್ರಗತಿ ಕುರಿತು ಸಭೆ: ಇದಕ್ಕೂ ಮೊದಲು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪಾತ್ರ ಹಾಗೂ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜು ಅವರು ಅಧ್ಯಕ್ಷತೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ಅಭಿವೃದ್ಧಿ ಹಾಗೂ ನಗರ ಸೌಂದರ್ಯ ಹೆಚ್ಚಿಸುವ ಸಲುವಾಗಿ ಸಭೆ ಮಾಡಲಾಯಿತು.

ಸಭೆಯಲ್ಲಿ ನವರಂಗ ದರ್ವಾಜ್ ಹಾಗೂ ಪುರತತ್ವ ಇಲಾಖೆಯ ವಸ್ತು ಸಂಗ್ರಹಾಲಯ, ತೀನ್ ಕಂದಿಲ್, ಕಾಸಭಾವಿ, ಅಮ್ ತಲಾಬ್, ಮಾವಿನ ಕೆರೆ ಅಭಿವೃದ್ಧಿ ಕುರಿತು ಸುರ್ಧಿಘ ಚರ್ಚಿಸಲಾಯಿತು.

ಕೋಟೆ ವೀಕ್ಷಣೆ: ಪತ್ರಿಕಾಗೋಷ್ಠಿಗೂ ಮೊದಲು ನಗರದ ನವರಂಗ್ ಧರ್ವಾಜ್ ಕೋಟೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ಕಾಮಗಾರಿಯು ಗುಣಮಟ್ಟ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳು ಹಾಗೂ ಪಾಲಿಕೆಯ ವಿಭಾಗ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande