ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ
ವಿಜಯಪುರ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ಮಾದಕ ವಸ್ತು ನಿಷೇಧ ಕುರಿತು
ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ


ವಿಜಯಪುರ, 05 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಅವರು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳನ್ನು ಚಾಕಲೇಟ, ಪಾನ್ ಮಸಾಲಾ ಮತ್ತು ಇತರೆ ತಿಂಡಿ-ತಿನಿಸುಗಳಲ್ಲಿ ಕಲಬೆರಕೆ ಮಾಡುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಮಾದಕ ವಸ್ತುಗಳ ನಿಯಂತ್ರಣವು ವ್ಯಸನದ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಹಂತಗಳನ್ನು ಒಳಗೊಂಡಿದೆ. ಇದು ವ್ಯಸನದ ಮೂಲ ಕಾರಣಗಳನ್ನು ಮತ್ತು ಅದರ ಪರಿಣಾಮಗಳನ್ನು ನಿರ್ವಹಿಸಲು ವಿವಿಧ ವಿಧಾನಗಳನ್ನು ಬಳಸುತ್ತದೆ. ಉತ್ತೇಜಕಗಳು ನಮ್ಮ ದೇಹದ ನೈಸರ್ಗಿಕ ಕಾರ್ಯಗಳನ್ನು ಹೆಚ್ಚಿಸುವ ಔಷಧಿಗಳ ವಿಧಗಳಾಗಿವೆ. ಅವು ಜಾಗರೂಕತೆ ಮತ್ತು ಸಂಭ್ರಮದ ಭಾವನೆಯನ್ನು ಉಂಟುಮಾಡುತ್ತವೆ. ಒಬ್ಬ ವ್ಯಕ್ತಿಯು ನಿಗದಿತ ಪ್ರಮಾಣವನ್ನು ಅನುಸರಿಸದೆ ಅದನ್ನು ಸೇವಿಸಿದರೆ, ಅದು ಮಾದಕತೆ ಅಥವಾ ಅವಲಂಬನೆಗೆ ಕಾರಣವಾಗಹುಬುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಮಾದಕ ವಸ್ತು ನಿಷೇಧ ಕುರಿತು ಸ-ವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸಿ.ಚಿ.ನಾಟೀಕಾರ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande