ಸಮೂಹ ಸಾರಿಗೆ : ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡಿ - ಪ್ರಭುಸ್ವಾಮಿ ಹಿರೇಮಠ
ಕೊಪ್ಪಳ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಹೆಚ್ಚಿನ ಸಂಖ್ಯೆಯ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ತಡೆಗಟ್ಟಲು ಸಮೂಹ ಸಾರಿಗೆ ಮತ್ತು ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ತಿಳಿಸಿದ್ದಾರೆ. ಕೊಪ್ಪಳ ಪ್ರಾದೇಶಿಕ ಸಾರಿಗ
ಸಮೂಹ ಸಾರಿಗೆ - ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡಿ - ಪ್ರಭುಸ್ವಾಮಿ ಹಿರೇಮಠ


ಸಮೂಹ ಸಾರಿಗೆ - ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡಿ - ಪ್ರಭುಸ್ವಾಮಿ ಹಿರೇಮಠ


ಕೊಪ್ಪಳ, 05 ನವೆಂಬರ್ (ಹಿ.ಸ.) :

ಆ್ಯಂಕರ್ : ಹೆಚ್ಚಿನ ಸಂಖ್ಯೆಯ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ತಡೆಗಟ್ಟಲು ಸಮೂಹ ಸಾರಿಗೆ ಮತ್ತು ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ತಿಳಿಸಿದ್ದಾರೆ.

ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ವಾಹನಗಳ ಸಂಚಾರ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ವಾಹನಗಳು ಹೊರಸೂಸುವ ಅನಿಲವು ಶುದ್ಧಗಾಳಿಯನ್ನು ವಿಷಕಾರಿಯನ್ನಾಗಿ ಮಾಡುತ್ತಿದೆ. ವಾಹನಗಳು ಹೊರಸೂಸುವ ವಿಷಕಾರಿ ಅನಿಲಗಳಿಂದ ಮಾನವನ ಆರೋಗ್ಯದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮಗಳು ಉಂಟಾಗುತ್ತಿವೆ. ಆದ್ದರಿಂದ ವಾಹನ ಮಾಲೀಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಮೀಪದ ಪ್ರದೇಶಗಳಲ್ಲಿ ಹೋಗಿ ಬರಲು ಬೈಸಿಕಲ್ ಬಳಸಬೇಕು. ಎಲೆಕ್ಟಿಕ್ ವಾಹನಗಳನ್ನು ಖರೀದಿಸಿ ಬಳಕೆ ಮಾಡಬಹುದು ಎಂದರು.

ವಾಹನಗಳಿಗೆ ಕಲಬೆರಕೆ ಇಂಧನವನ್ನು ಮತ್ತು ಕಡಿಮೆ ದರ್ಜೆಯ ಕಳಪೆ ಇಂಜಿನ್ ಆಯಿಲ್ ಉಪಯೋಗಿಸಬಾರದು. ಕಪ್ಪು ಮತ್ತು ದಟ್ಟವಾದ ಹೊಗೆ ಬರುತ್ತಿದ್ದರೆ ತಕ್ಷಣ ಅಧಿಕೃತ ಮಾರಾಟಗಾರರು ಅಥವಾ ಸರ್ವೀಸಿಂಗ್ ಸೆಂಟರ್‌ಗಳಲ್ಲಿ ವಾಹನಗಳನ್ನು ದುರಸ್ತಿ ಮಾಡಿಸಬೇಕು. ಸೈಲೆನ್ಸರ್‌ಗಳಲ್ಲಿ ಟ್ಯಾಂಪರ್ ಮಾಡಬೇಡಿ ಹಾಗೂ ಕರ್ಕಶ ಶಬ್ದಗಳು ಬರದಂತೆ ನೋಡಿಕೊಳ್ಳಬೇಕು. ವಾಹನದ ಏರ್ ಫಿಲ್ಟರ್ ಮತ್ತು ಸ್ಪಾರ್ಕ್ ಪ್ಲಗ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ವಾಹನಗಳಿಂದ ಹೊಗೆ ಸೂಸುವ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ತಮ್ಮ ವಾಹನಗಳನ್ನು ಸದಾ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಪರಿಸರದ ರಕ್ಷಣೆಗಾಗಿ ಗಿಡಗಳನ್ನು ನೆಡಬೇಕು. ತಿಂಗಳಾದ್ಯಂತ ಜರುಗುವ ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಸಹಕರಿಸುವಂತೆ ಅವರು ತಿಳಿಸಿದರು.

ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚನ್ನಬಸವ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ವಾಯು ಮಾಲಿನ್ಯದಿಂದ ಮಾನವನ ಆರೋಗ್ಯದ ಮೇಲೆ ಹಾಗೂ ಪರಿಸರದ ಮೇಲೆ ಆಗುವ ಹಾನಿಗಳ ಬಗ್ಗೆ ತಿಳಿಸಿ, ಅದನ್ನು ನಿಯಂತ್ರಿಸುವ ಕ್ರಮದ ಬಗ್ಗೆ ವಿವರಿಸಿದರು.

ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಜಿ.ಎಂ.ಸುರೇಶ ಅವರು, ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವ ಬಗ್ಗೆ ಹಾಗೂ ನಿಯಮಿತವಾಗಿ ವಾಹನದ ಮಾಲಿನ್ಯ ತಪಾಸಣೆ ಮಾಡಿಸುವ ಬಗ್ಗೆ ವಿವರಣೆ ನೀಡಿದರು.

ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಎನ್.ಪ್ರಭಾಕರ್ ಮತ್ತು ವಿನಾಯಕ್ ನಾಯಕ್, ಮೋಟಾರು ವಾಹನ ನಿರೀಕ್ಷಕ ವಿಜೇಂದ್ರ ಢವಳಗಿ, ಕಚೇರಿ ಅಧೀಕ್ಷಕ ಎನ್. ನಾಗೇಶಕುಮಾರ ಸೇರಿದಂತೆ ಇತರೆ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande