
ಧಾರವಾಡ, 05 ನವೆಂಬರ್ (ಹಿ.ಸ.) :
ಆ್ಯಂಕರ್ : ವಿವಾದಾತ್ಮಕ ಹೇಳಿಕೆಗೆ ಗುರಿಯಾಗಿರುವ ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1), (2) ಮತ್ತು (3) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಕನ್ನೇರಿ ಮಠ ಬೀಳೂರು ಗ್ರಾಮ ತಾಲೂಕ ಜತ್ತ ಮಹಾರಾಷ್ಟ್ರ ರಾಜ್ಯ ಇವರನ್ನು ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನವೆಂಬರ್ 05, 2025 ರಿಂದ ಜನೆವರಿ 03, 2026 ರವರೆಗೆ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಪ್ರತಿಬಂಧಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa