

ರಾಯಚೂರು, 05 ನವೆಂಬರ್ (ಹಿ.ಸ.) :
ಆ್ಯಂಕರ್ : ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಪೆÇೀಲಿಯೋ ಲಸಿಕೆಯ ಮಾದರಿಯಲ್ಲಿ ಎಲ್ಲಾ ಹಳ್ಳಿಗಳಲ್ಲಿ ಲಸಿಕೆ ಅಭಿಯಾನ ನಡೆಸಬೇಕು. ರೈತ ಬಾಂಧವರು ತಮ್ಮಲ್ಲಿರುವ ಎಲ್ಲಾ ದನ, ಎಮ್ಮೆ ಮತ್ತು 3 ತಿಂಗಳ ಮೇಲ್ಪಟ್ಟ ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಸಾಂಕ್ರಾಮಿಕ ರೋಗದಿಂದಾಗುವ ಆರ್ಥಿಕ ನಷ್ಟ ತಪ್ಪಿಸಬೇಕು. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ತಿಳಿಸಿದ್ದಾರೆ.
ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಸಾಮೂಹಿಕ ಲಸಿಕಾ ಕಾರ್ಯಕ್ರಮಕ್ಕೆ ಪೆÇೀಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೆಶಕರಾದ ಡಾ.ಪೆÇೀಮ್ ಸಿಂಗ್, ವಿ.ವೈ.ವಾಲ್ಮೀಕಿ ಸೇರಿದಂತೆ ಇತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್