ಇಂಕ್ಯುಬೇಶನ್ ಕುರಿತು ಸೋಮವಾರ ಕಾರ್ಯಾಗಾರ
ಬಳ್ಳಾರಿ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಆರ್‍ಎಎಂಪಿ ಯೋಜನೆಯಡಿ ಇಂಕ್ಯುಬೇಶನ್ ಯೋಜನೆ ಕುರಿತು ನವೆಂಬರ್ 10ರ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ಇನ್ಸ್ಟ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್‍ಮೆಂಟ
ಇಂಕ್ಯುಬೇಶನ್ ಕುರಿತು ಸೋಮವಾರ ಕಾರ್ಯಾಗಾರ


ಬಳ್ಳಾರಿ, 05 ನವೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಆರ್‍ಎಎಂಪಿ ಯೋಜನೆಯಡಿ ಇಂಕ್ಯುಬೇಶನ್ ಯೋಜನೆ ಕುರಿತು ನವೆಂಬರ್ 10ರ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ಇನ್ಸ್ಟ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್‍ಮೆಂಟ್ (ಬಿಐಟಿಎಂ) ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಒಂದು ದಿನದ ಜಾಗೃತಿ ಕಾರ್ಯಾಗಾರವನ್ನು ಏರ್ಪಡಿಸಿದೆ.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಲ್ಲಿ ಹಣಕಾಸು, ತಾಂತ್ರಿಕ ಮತ್ತು ಮಾರ್ಗದರ್ಶನ ಬೆಂಬಲದ ಕುರಿತು ಜಾಗೃತಿ ಮೂಡಿಸಲಾಗುವುದು. ಇಂಕ್ಯುಬೇಶನ್ ಸೌಲಭ್ಯಗಳ ಪ್ರದರ್ಶನ, ಯಶಸ್ಸಿನ ಕಥೆಗಳ ಹಂಚಿಕೊಳ್ಳುವಿಕೆ ಮತ್ತು ನೆಟ್ ವರ್ಕಿಂಗ್‍ಗಾಗಿ ತಜ್ಞರು, ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ಒದಗಿಸಿಕೊಡಲಾಗುವುದು. ಆಸಕ್ತ ವಿದ್ಯಾರ್ಥಿಗಳು, ಉದ್ದಿಮೆದಾರರು ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.9449226221, 9964768334 ಮತ್ತು 08392242370 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande