
ವಿಜಯಪುರ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಾಗೂ ರಜತ ಮಹೋತ್ಸವದ ಅಂಗವಾಗಿ ನಿಗಮದ ಅಧಿಕಾರಿ, ಸಿಬ್ಬಂದಿಗೆ ಕಲಬುರಗಿಯ ಶ್ರೀ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಬುಧವಾರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಒಟ್ಟು 9 ವಿಭಾಗಗಳಲ್ಲಿನ 450 ಕ್ರೀಡಾಪಟುಗಳು ಭಾಗವಹಿಸಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ಕ್ರೀಡಾಪಟುಗಳು ವೈಯಕ್ತಿಕ ಅಥ್ಲೆಟಿಕ್ಸ್ ಆಟಗಳಲ್ಲಿ 10 ಬಹುಮಾನಗಳನ್ನು ಪಡೆದಿದ್ದಾರೆ.
ಮಹಿಳೆಯರ ಥ್ರೋಬಾಲ್ ಆಟದಲ್ಲಿ ಕಲಬುರಗಿ ವಿಭಾಗ-1ರ ತಂಡದ ವಿರುದ್ಧ ವಿಜಯಪುರ ವಿಭಾಗ-1ರ ಮಹಿಳಾ ಕ್ರೀಡಾಪಟುಗಳು ವಿಜೇತರಾಗಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಕ್ರೀಡಾಪಟುಗಳ ಸಾಧನೆಗೆ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಕೇಂದ್ರ ಕಚೇರಿಯ ಇಲಾಖೆಯ ಮುಖ್ಯಸ್ಥರು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ ಎಂದು ವಿಜಯಪುರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande