
ಪಾಟ್ನಾ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಲಖಿಸರಾಯ್‌ನಲ್ಲಿ ಮತ ಚಲಾಯಿಸಿದ ನಂತರ ಅವರು, “ಬುರ್ಖಾ ಧರಿಸಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಪರಿಶೀಲಿಸಬೇಕು” ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಮತದಾನವನ್ನು ಪ್ರಜಾಪ್ರಭುತ್ವದ ಮಹಾ ಹಬ್ಬ ಎಂದು ವರ್ಣಿಸಿ, ಎಲ್ಲರೂ ಭಾಗವಹಿಸಬೇಕು ಎಂದು ಕರೆ ನೀಡಿದರು.
ಸಂಜಯ್ ಸರಾಫ್, ನಿತಿನ್ ನವೀನ್, ವೀಣಾ ದೇವಿ, ಸೂರಜ್ ಭನ್ ಸಿಂಗ್ ಸೇರಿದಂತೆ ಅನೇಕ ನಾಯಕರು ಮತ ಚಲಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa