ಕಬ್ಬಿಗೆ ದರ ನಿಗದಿಗೊಳಿಸಿ : ಕಾರಜೋಳ ಆಗ್ರಹ
ರಾಷ್ಟ್ರ
ಕಾರಜೋಳ


ವಿಜಯಪುರ, 06 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬು ಖರೀದಿಗೆ ಬೆಂಬಲ ಬೆಲೆ ನೀಡುವ ಮೂಲಕ ಕಬ್ಬು ಬೆಳೆಗಾರರ ಹಿತರಕ್ಷಣೆ ಕಾಪಾಡಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಬೇಡಿಕೆಯನ್ನು ಪರಿಗಣಿಸುವ ನಿಟ್ಟಿನಲ್ಲಿ ಗಂಭೀರವಾಗಿ ಯೋಚಿಸುತ್ತಿಲ್ಲ, ನೆರೆಯ ಮಹಾರಾಷ್ಟ್ರ ಸರ್ಕಾರ ಕಬ್ಬು ಬೆಳೆಗಾರರ ಹಿತರಕ್ಷಣೆಯ ದೃಷ್ಟಿಯಿಂದ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡುತ್ತಿವೆ, ಇಲ್ಲಿ ಹೋಲಿಕೆ ಮಾಡಿದಾಗ ಮಹಾರಾಷ್ಟç ಭಾಗದ ಸಕ್ಕರೆ ಕಾರ್ಖಾನೆಗಳು ೪೦೦ ರೂ. ಅಧಿಕ ದರ ನೀಡುತ್ತಿವೆ, ಈ ಕಾರ್ಯಕ್ಕೆ ಸರ್ಕಾರವೂ ಸಹ ಪ್ರೋತ್ಸಾಹ ಬೆಲೆ ನೀಡಲು ಮುಂದಾಗಿದೆ, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಕಬ್ಬಿನಿಂದ ಕೇವಲ ಸಕ್ಕರೆ ಮಾತ್ರ ಉತ್ಪಾದಿಸುವುದಿಲ್ಲ, ಎಥೆನಾಲ್ ಸೇರಿದಂತೆ ಅನೇಕ ಉಪ ಉತ್ಪನ್ನಗಳನ್ನು ಉತ್ಪಾದಿಸುತ್ತಿವೆ, ಆದರೆ ಅದರ ಲಾಭಾಂಶದಲ್ಲಿ ರೈತರ ಪಾಲು ಸೇರುತ್ತಿಲ್ಲ, ಇದರ ಲಾಭಾಂಶವೂ ಸಹ ನಮ್ಮ ರೈತರಿಗೆ ದೊರಕುವ ನಿಟ್ಟಿನಲ್ಲಿ ವಿಶೇಷ ಕ್ರಮ ಕೈಗೊಳ್ಳುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಕಾರಜೋಳ ಹೇಳಿದ್ದಾರೆ.

ಈ ಹಿಂದೆ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ೨೦೧೩ ರಲ್ಲಿ ಕರ್ನಾಟಕ ಕಬ್ಬು (ಉತ್ಪಾದನೆ ಹಾಗೂ ಪೂರೈಕೆ ನಿಯಂತ್ರಣ) ಕಾಯ್ದೆ ೨೦೧೩ ರ ಅಡಿಯಲ್ಲಿ ಬೆಲೆ ನಿರ್ಧರಿಸುವ ಹಕ್ಕನ್ನು ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ನಿರ್ಧಾರಕ್ಕೆ ಬಿಟ್ಟಿದ್ದರು, ರಾಜ್ಯ ಸಲಹಾ ಬೆಲೆ ನೀಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದರು, ಈ ಕಾಯ್ದೆಯ ಮೂಲಕ ರಾಜ್ಯ ಸರ್ಕಾರ ಸಹ ರೈತರಿಗೆ ಕಬ್ಬಿಗೆ ಮಹಾರಾಷ್ಟç ಮಾದರಿಯಲ್ಲಿ ಬೆಂಬಲ ಬೆಲೆ ನೀಡಬೇಕು, ಕಷ್ಟಪಟ್ಟು ಸಾಲ ಸೋಲ ಮಾಡಿ ತೊಂದರೆಯಲ್ಲಿರುವ ರೈತರ ಹಿತರಕ್ಷಣೆಗೆ ಸರ್ಕಾರ ಮುಂದಾಗಬೇಕು, ಕಬ್ಬು ಬೆಳೆಗಾರರ ಎಲ್ಲ ಬೇಡಿಕೆಗಳು ನ್ಯಾಯಯುತವಾಗಿದ್ದು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವ ಮೊದಲು ತನ್ನ ವ್ಯಾಪ್ತಿಯಲ್ಲಿರುವ ಕಾರ್ಯವನ್ನು ಸಮರ್ಥವಾಗಿ ಮಾಡಿ ರೈತರಿಗೆ ನ್ಯಾಯ ಒದಗಿಸಲಿ ಎಂದು ಕಾರಜೋಳ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande