ರಾಯಚೂರು ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ - ಅರ್ಜಿ ಆಹ್ವಾನ
ರಾಯಚೂರು, 06 ನವೆಂಬರ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15
ರಾಯಚೂರು ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ - ಅರ್ಜಿ ಆಹ್ವಾನ


ರಾಯಚೂರು, 06 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಇಲಾಖೆಯಿಂದ ಆಧಾರ್ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಚಿತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ ಯೋಜನೆ, ಶಿಶುಪಾಲನೆ ಭತ್ಯ ಯೋಜನೆ, ಮರಣ ಪರಿಹಾರ ನಿಧಿ ಯೋಜನೆ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೃಷ್ಟಿದೋಷ ಹೊಂದಿದ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನೆ-ಸಲಕರಣೆ ಯೋಜನೆ ಹಾಗೂ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್ ಯೋಜನೆಯಡಿ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತರು ಅರ್ಜಿಯನ್ನು ನವೆಂಬರ್ 15ರೊಳಗಾಗಿ ಫಲಾನುಭವಿಗಳು ಆನ್‌ಲೈನ್ ಸೇವಾ-ಸಿಂಧು ತಂತ್ರಾAಶದಡಿ ಮೂಲಕ ಗ್ರಾಮ-ಓನ್, ಕರ್ನಾಟಕ-ಓನ್, ಬೆಂಗಳೂರು-ಓನ್ ವಿಳಾಸ: https//sevasindhanur.karnatak.gov.insevasindhu/Kannada ನಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಂ.ಆರ್.ಡಬ್ಯ್ಲು ರಾಯಚೂರು ಅಮರೇಶ ಯಾದವ್ ಮೊಬೈಲ್ ಸಂಖ್ಯೆ: 9972237508, ಮಾನವಿ-ಸಿರವಾರ ರಾಘವೇಂದ್ರ ಮೊಬೈಲ್ ಸಂಖ್ಯೆ: 9740203769, ದೇವದುರ್ಗ ಲೋಕಪ್ಪ ನೂರು ನಾಯ್ಕೆ ಮೊಬೈಲ್ ಸಂಖ್ಯೆ: 9945207693, ಸಿಂಧನೂರು ಬಸವರಾಜ ಸಾಸಲಮರಿ ಮೊಬೈಲ್ ಸಂಖ್ಯೆ: 9900298217, ಲಿಂಗಸ್ಗೂರು-ಮಸ್ಕಿ ನಾಗರಾಜ ಮೊಬೈಲ್ ಸಂಖ್ಯೆ: 9901668380 ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಾವಿನ ಕೆರೆ ರಸ್ತೆ, ಆಜಾದ ನಗರ, ರಾಯಚೂರು ಜಿಲ್ಲಾ ಕಚೇರಿಗೆ ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ.

ಇಲಾಖೆಯ ಯೋಜನೆಗಳಿಗೆ ಸಂಪೂರ್ಣವಾದ ಮಾರ್ಗದರ್ಶನವನ್ನು ಈ ಇಲಾಖೆಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಪ್ರದೇಶದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಫಲಾನುಭವಿಗಳು ಆನ್‌ಲೈನ್ ತಂತ್ರಾ0ಶದಲ್ಲಿ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಹಾರ್ಡ್ ಪ್ರತಿಯೊಂದಿಗೆ ಅರ್ಜಿಯನ್ನು ಈ ಇಲಾಖೆಗೆ ಸಲ್ಲಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande