
ನವದೆಹಲಿ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇಂದು ಚಿನ್ನದ ದರ 10 ಗ್ರಾಂಗೆ ರೂ. 900ರವರೆಗೆ ಅಗ್ಗವಾಗಿದೆ. ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನ ₹1,21,470–₹1,21,620 ಹಾಗೂ 22 ಕ್ಯಾರೆಟ್ ಚಿನ್ನ ₹1,11,340–₹1,11,490 ದರದಲ್ಲಿ ವಹಿವಾಟು ನಡೆಯುತ್ತಿದೆ.
ದೆಹಲಿ, ಮುಂಬೈ, ಅಹಮದಾಬಾದ್, ಚೆನ್ನೈ, ಕೋಲ್ಕತ್ತಾ, ಪಾಟ್ನಾ ಮತ್ತು ಬೆಂಗಳೂರು ಸೇರಿದಂತೆ ಎಲ್ಲೆಡೆ ಬೆಲೆ ಇಳಿಕೆ ಕಂಡುಬಂದಿದೆ. ವಿಶ್ಲೇಷಕರ ಪ್ರಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ ತಗ್ಗಿರುವುದು ಮತ್ತು ಡಾಲರ್ ಬಲವಾಗಿರುವುದು ಈ ಕುಸಿತಕ್ಕೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa