ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಬಳ್ಳಾರಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ ಎಂದು
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ


ಬಳ್ಳಾರಿ, 06 ನವೆಂಬರ್ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.

ಸೂಚನೆ:

ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ಅಭ್ಯರ್ಥಿಗಳ ಹೆಸರು ನೋಂದಾಯಿಸಿರಬೇಕು.

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವಷರ್ಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-200215, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande