
ನವದೆಹಲಿ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯದಲ್ಲಿ ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೋದಿ ಅವರು ಬೆಳಿಗ್ಗೆ ಅರಾರಿಯಾ ಮತ್ತು ಮಧ್ಯಾಹ್ನ ಭಾಗಲ್ಪುರದಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೆ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಅಮಿತ್ ಶಾ ಅವರು ಚಂಪಾರಣ್, ಮೋತಿಹಾರಿ ಮತ್ತು ಮಧುಬನಿಯಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡಿ ಎನ್ ಡಿ ಎ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ ಎಂದು ಬಿಜೆಪಿ ತನ್ನ ಅಧಿಕೃತ ಎಕ್ಸ ಖಾತೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa