
ರಾಯಚೂರು, 06 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧನೆ ಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಶಿಕ್ಷಕರಿಗೆ ರಾಜ್ಯ ಪ್ರಶಸಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಜಾದ ನಗರ, ರಾಯಚೂರು ಇವರ ಕಚೇರಿ ದೂರವಾಣಿ ಸಂಖ್ಯೆ : 08532-200992 ಇಲ್ಲಿ ಪಡೆಯಬಹುದಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್