ಪೂರ್ಣ ಪ್ರಮಾಣದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ವ್ಯಯ : ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
ಬಳ್ಳಾರಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಪರಿಶಿಷ್ಟರ ಆರ್ಥಿಕ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಡಲಾಗುತ್ತಿದ್ದು, ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು
ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಮೀಸಲಿದ್ದು, ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ


ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಮೀಸಲಿದ್ದು, ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ


ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಮೀಸಲಿದ್ದು, ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ


ಬಳ್ಳಾರಿ, 06 ನವೆಂಬರ್ (ಹಿ.ಸ.) :

ಆ್ಯಂಕರ್ : ಪರಿಶಿಷ್ಟರ ಆರ್ಥಿಕ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಡಲಾಗುತ್ತಿದ್ದು, ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಪರಿಶೀಲನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಪರಿಶಿಷ್ಟ ರೈತರ ಮಾಹಿತಿ ನೀಡಬೇಕು. ಕೃಷಿ, ತೋಟಗಾರಿಕೆ ಇಲಾಖೆ ವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಡಿ ಅನುಷ್ಠಾನಗೊಳ್ಳುವ ವಿವಿಧ ಸೌಲಭ್ಯ ಮತ್ತು ಉಪಕರಣಗಳನ್ನು ಯುವ ರೈತರಿಗೆ ವಿತರಿಸಬೇಕು. ಅವರಿಗೆ ಪೆÇ್ರೀತ್ಸಾಹ ನೆರವು ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಇಲಾಖೆಗಳಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇದರ ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿ, ಪ್ರಗತಿ ನಡೆಸಲಾಗುವುದು. ಕೊನೆಯಲ್ಲಿ ರಾಜ್ಯಮಟ್ಟದ ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಕುರಿತು ಪರಿಶೀಲನೆಯಾಗಲಿದೆ. ಹಾಗಾಗಿ ಪೂರಕ ಮಾಹಿತಿ ಇಟ್ಟುಕೊಳ್ಳಬೇಕು ಎಂದು ನೋಡಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಬಳಕೆಯಾಗದ ಅನುದಾನದ ಮರುಹಂಚಿಕೆ :

ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಹಂಚಿಕೆ ಮಾಡಿರುವ ಮೊತ್ತವು ಖರ್ಚಾಗದೇ ಉಳಿದ ಸಂದರ್ಭದಲ್ಲಿ ಮಾರ್ಚ್ ಅಂತ್ಯದೊಳಗೆ ಅನುದಾನ ಖರ್ಚು ಮಾಡಬೇಕು. ಇಲ್ಲವಾದಲ್ಲಿ ಲೆಕ್ಕ ಪರಿಶೋಧನೆಯಾದ ಬಳಿಕ ಅದರ ಮುಂದಿನ ಹಣಕಾಸು ವರ್ಷಕ್ಕೆ ರಾಜ್ಯ ಸರ್ಕಾರದಿಂದ ಸೇರ್ಪಡೆಯಾಗುತ್ತದೆ. ಆದರೆ ಕೇಂದ್ರದ ಹಣ ಮರಳುವುದಿಲ್ಲ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು.

ಮುಖ್ಯವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಒದಗಿಸಿದ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ವಿನಿಯೋಗಿಸಬೇಕು. ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಒದಗಿಸಿದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ಪರಿಶಿಷ್ಟರ ಏಳಿಗೆಗಾಗಿ ತಲುಪಿಸುವಲ್ಲಿ ತೊಂದರೆಗಳಿದ್ದಲ್ಲಿ ತಿಳಿಸಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಅಧಿಕಾರಿಗಳ ತರಾಟೆ :

ಸಭೆಯಲ್ಲಿಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು, ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande