
ವಿಜಯಪುರ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಎಲ್ಲ ಕ್ಷೇತ್ರಗಳಲ್ಲಿ 9ರಿಂದ 16 ವರ್ಷದೊಳಗಿನ ಪ್ರತಿಭಾವಂತ ಮಕ್ಕಳನ್ನು ರಾಜ್ಯ ಮಟ್ಟದ ಚಿನ್ನರ ಕಲಾಶ್ರೀ ಶಿಬಿರಕ್ಕೆ ಆಯ್ಕೆ ಮಾಡಲು ದಿನಾಂಕ : 10-11-2025 ರಂದು ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯ್ಕೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಸ್ಪರ್ಧೆ, ಸಂಗೀತ ಕಲೆಗಳಾದ ವಾದ್ಯ ಸಂಗೀತ, ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ, ವಿಜ್ಞಾನದಲ್ಲಿ ನೂತನ ಅವಿಷ್ಕಾರ ವಿಭಾಗದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ತೀರ್ಪುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಅವಶ್ಯಕವಿರುವ ಸಾಧನ-ಸಲಕರಣೆ, ಬಣ್ಣಗಳನ್ನು ಮಕ್ಕಳೇ ತರಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 7760402239 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande