ಬಳ್ಳಾರಿ : ನಿರುದ್ಯೋಗ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ
ಬಳ್ಳಾರಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್‍ನ ಬಳ್ಳಾರಿ ಜಿಲ್ಲಾ ಘಟಕವು ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಆಗ್ರಹಿಸಿ ನಗರದಲ್ಲಿ ಸಹಿ ಸಂಗ್ರಹ ಚಳವಳಿಯನ್ನು ಗುರುವಾರ ನಡೆಸಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ
ಬಳ್ಳಾರಿ : ನಿರುದ್ಯೋಗ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ


ಬಳ್ಳಾರಿ : ನಿರುದ್ಯೋಗ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ


ಬಳ್ಳಾರಿ : ನಿರುದ್ಯೋಗ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ


ಬಳ್ಳಾರಿ, 06 ನವೆಂಬರ್ (ಹಿ.ಸ.) :

ಆ್ಯಂಕರ್ : ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್‍ನ ಬಳ್ಳಾರಿ ಜಿಲ್ಲಾ ಘಟಕವು ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಆಗ್ರಹಿಸಿ ನಗರದಲ್ಲಿ ಸಹಿ ಸಂಗ್ರಹ ಚಳವಳಿಯನ್ನು ಗುರುವಾರ ನಡೆಸಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕು. ನೇಮಕಾತಿಗಳ ವಯೋಮಿತಿಯಲ್ಲಿ ಕನಿಷ್ಠ 5 ವರ್ಷಗಳ ಸಡಿಲಿಕೆ ಮಾಡಬೇಕು. ಎಲ್ಲಾ ರೀತಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಂಡು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಸಂಘಟನೆಯು ಆಗ್ರಹಿಸಿದೆ.

ಕೆಪಿಎಸ್‍ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರ್ಕಾರ ಹೋಟಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಜಾರಿಯಲ್ಲಿರುವ ಗುತ್ತಿಗೆ ನೌಕರಿ / ಹೊರ ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಮತ್ತು ಎಲ್ಲಾ ಹುದ್ದೆಗಳಿಗೂ ಕಾಯಂ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದೆ.

ದೇಶಾದ್ಯಂತ ಗಿಗ್ ಕಾರ್ಮಿಕರನ್ನು ಕಾರ್ಮಿಕ ಇಲಾಖೆಯ ಅಡಿಯ ಕಾರ್ಮಿಕರು ಎಂದು ಪರಿಗಣಿಸಿ ಅವರಿಗೆ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು. ಉದ್ಯೋಗಾವಕಾಶ ದೊರೆಯುವವರೆಗೆ ನಿರುದ್ಯೋಗ ಭತ್ಯೆ ನೀಡಬೇಕು. ಸರ್ಕಾರಿ ಸಂಸ್ಥೆಗಳ ಖಾಸಗೀಕರಣವನ್ನು ತಕ್ಷಣವೇ ನಿಲ್ಲಿಸಬೇಕು. ನೇಮಕಾತಿಗಳಿಗೆ ಅರ್ಜಿ ಸಲ್ಲಿಸಲು ದುಬಾರಿ ಪರೀಕ್ಷಾ ಶುಲ್ಕ, ಇನ್ನಿತರೆ ಶುಲ್ಕ ಸಂಗ್ರಹ ಮಾಡುತ್ತಿರುವ ಕ್ರಮವನ್ನು ಕೈಬಿಟ್ಟು, ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande