ಮೊದಲು ಮತ, ನಂತರ ತಿಂಡಿ : ಪ್ರಧಾನಿ ಕರೆ
ನವದೆಹಲಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಗುತ್ತಿದೆ. 18 ಜಿಲ್ಲೆಗಳ 121 ವಿಧಾನ ಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ
Pm


ನವದೆಹಲಿ, 06 ನವೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಗುತ್ತಿದೆ. 18 ಜಿಲ್ಲೆಗಳ 121 ವಿಧಾನ ಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.

ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದ್ದಾರೆ.

ಎಕ್ಸ ಖಾತೆಯಲ್ಲಿ ಕರೆ ನೀಡಿರುವ ಅವರು , ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತ. ಈ ಹಂತದ ವಿಧಾನ ಸಭಾ ಚುನಾವಣೆಯ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ. ಈ ಸಂದರ್ಭದಲ್ಲಿ, ಮೊದಲ ಬಾರಿಗೆ ಮತ ಚಲಾಯಿಸಲಿರುವ ರಾಜ್ಯದ ನನ್ನ ಎಲ್ಲಾ ಯುವ ಸ್ನೇಹಿತರಿಗೆ ನನ್ನ ವಿಶೇಷ ಅಭಿನಂದನೆಗಳು. ಮೊದಲು ಮತ ಚಲಾಯಿಸಿ, ನಂತರ ಉಪಹಾರ ಸೇವಿಸಿ ಎಂದು‌ ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande