
ವಿಜಯಪುರ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಇವರ ಮೂಲಕ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ ಪ್ರಸಕ್ತ 2025-26ನೇ ಸಾಲಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣದ 39 ನೇಯ ತಂಡದ ತರಬೇತಿ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರ ಅಧಿಕಾರಿ,ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ,ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ,ಮಾನಸ ಗಂಗೋತ್ರಿ ಮೈಸೂರ ಇವರಿಂದ ಅರ್ಜಿಗಳನ್ನು ಪಡೆದು, ನವೆಂಬರ್ 30, 2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande