
ಹೊಸಪೇಟೆ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನವೆಂಬರ್ 9 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಲಸಂಪನ್ಮೂಲ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಹಾಗೂ ಉಪಾಧ್ಯಕ್ಷರು, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಎನ್.ಎಸ್.ಭೋಸರಾಜು ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕೂಡ್ಲಿಗಿ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ್, ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ.
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಶಿವಾನಂದ ಎಸ್. ಪಾಟೀಲ್, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವ ಶರಣಬಸಪ್ಪ ದರ್ಶನಾಪುರ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಬಿ. ಖಂಡ್ರೆ, ಕೃಷಿ ಇಲಾಖೆ ಸಚಿವ ಎನ್. ಚೆಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಹಜ್ ಹಾಗೂ ಪೌರಾಡಳಿತ ಇಲಾಖೆ ಸಚಿವ ರಹೀಂ ಖಾನ್, ಕಾರ್ಮಿಕ ಇಲಾಖೆ ಸಚಿವ ಸಂತೋಷ ಎಸ್. ಲಾಡ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪುರ, ಪಶು ಸಂಗೋಪನೆ ಮತ್ತು ರೇμÉ್ಮ ಇಲಾಖೆ ಸಚಿವ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆ ಸಚಿವ ಬಿ.ಎಸ್. ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಳರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ್ ಎಸ್. ವೈದ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಇಲಾಖೆ ಸಚಿವ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಕ್ಷೇತ್ರ (ವಿಧಾನ ಸಭೆ) ಶಾಸಕರು ಬಸವರಾಜ ರಾಯರೆಡ್ಡಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಮತ್ತು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೇವರ್ಗಿ ಕ್ಷೇತ್ರ (ವಿಧಾನ ಸಭೆ) ಶಾಸಕ ಡಾ.ಅಜಯ್ ಧರ್ಮಸಿಂಗ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಗೌರವಾನ್ವಿತ ಉಪಸ್ಥಿತರಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಬಿ. ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಮೂರ್ತಿ.ಕೆ, ಮತ್ತು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಕೂಡ್ಲಿಗಿ ತಾಲೂಕು ಅಧ್ಯಕ್ಷ ಶೇಕ್ ಮಹಮ್ಮದ್ ಜಿಲಾನ್ ಉಪಸ್ಥಿತಿ ಇರಲಿದ್ದಾರೆ. ವಿಶೇಷ ಅಹ್ವಾನಿತರಾಗಿ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಇವರು ಆಗಮಿಸಲಿದ್ದಾರೆ.
ಗೌರವಾನ್ವಿತ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಾಗೂ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಕೆ.ಪವಿತ್ರ, ಇಂಧನ ಹಾಗೂ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತರು ಜಹೀರಾ ನಸೀಂ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎಜಾಜ್ ಹುಸೇನ್, ಮತ್ತು ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ ಉಪಸ್ಥಿತಿ ಇರಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್