
ಹೊಸಪೇಟೆ, 07 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಗೆ ಅನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಕ್ರಿಶ್ಚಿಯನ್ ಸಮುದಾಯದವರಿಗೆ ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗಕ್ಕೆ ಸಾಲ, ವೃತ್ತಿ ಪ್ರೋತ್ಸಾಹ ಯೋಜನೆ, ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಅರಿವು ಯೋಜನೆ, ವ್ಯಾಪಾರ, ಉದ್ದಿಮೆ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ತರಬೇತಿ ಯೋಜನೆ, ಚರ್ಚ್‍ಗಳ ದುರಸ್ಥಿ, ನವೀಕರಣ, ಜೀರ್ಣೋದ್ಧಾರ, ಮೇಲ್ದರ್ಜೆಗಾಗಿ ಸಹಾಯಧನ, ಸ್ಮಶಾನಗಳಿಗೆ ಅವರಣ ಗೋಡೆ ನಿರ್ಮಾಣ ಮತ್ತು ಸ್ಮಶಾನಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಹಾಯಧನ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಫಲಾನುಭವಿ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು.
ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 6 ಲಕ್ಷ ರೂ ಮೀರಿರಬಾರದು. ಅರ್ಜಿದಾರರು ಕನಿಷ್ಟ 18 ವರ್ಷದಿಂದ 55 ವರ್ಷಗಳ ವಯೋಮಿತಿಯಲ್ಲಿರಬೇಕು. ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿ, ಶೇ.3 ರಷ್ಟು ಅಂಗವಿಕಲರಿಗೆ ಮೀಸಲಾತಿ ಇರುತ್ತದೆ. ಅರ್ಜಿದಾರರು ಅನ್‍ಲೈನ್‍ನಲ್ಲಿ ಜಾತಿ ಮತ್ತು ಅದಾಯ ಪ್ರಮಾಣ ಪತ್ರ, ಅಧಾರ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನೆ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ ಭಾವಚಿತ್ರಗಳು ಅಪ್ಲೋಡ್ ಮಾಡಬೇಕು. http://kccdconline.kartnaka.gov.in ವೆಬ್‍ಸೈಟ್‍ನಲ್ಲಿ ನ.30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ, 1ನೇ ಮಹಡಿ, ಮೌಲಾನ ಅಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ. ದೂ.08392-294370 ಸಂಖ್ಯೆಗೆ ಕರೆ ಮಾಡಬಹುದು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮೆಹಬೂಬ್.ವಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್