
ಬಳ್ಳಾರಿ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಬಳ್ಳಾರಿ, ಕುರುಗೋಡು ಹಾಗೂ ಕಂಪ್ಲಿ ತಾಲ್ಲೂಕು ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ತರಕಾರಿ ಬೀಜದ ಕಿಟ್ ವಿತರಣೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಭೌತಿಕ 600 ಫಲಾನುಭವಿಗಳಿಗೆ ಆರ್ಥಿಕ ರೂ.30 ಲಕ್ಷ ಮತ್ತು ಪರಿಶಿಷ್ಟ್ಟ ಪಂಗಡದ ಭೌತಿಕ 2,400 ಫಲಾನುಭವಿಗಳಿಗೆ ಆರ್ಥಿಕ ರೂ.120 ಲಕ್ಷ ಇದೆ.
ಆಸಕ್ತ ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಖಾತೆಯ ಪುಸ್ತಕ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ಗಳೊಂದಿಗೆ ನವೆಂಬರ್ 25 ರೊಳಗಾಗಿ ಆಯಾ ಹೋಬಳಿಯ ಅಧಿಕಾರಿಗಳಿಗೆ ಅಥವಾ ಬಳ್ಳಾರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಬಳ್ಳಾರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್