
ಬೆಂಗಳೂರು, 07 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಇಂದು ಬೆಂಗಳೂರು- ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇಶ ಹಾಗೂ ಸಮಾಜದ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ ಹಾಗೂ ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.
ಆರ್‌ಎಸ್‌ಎಸ್ ಸಂಸ್ಥೆ ಇತ್ತೀಚೆಗಷ್ಟೇ, 2025ರ ಅಕ್ಟೋಬರ್ 2ರಂದು, ತನ್ನ ಶತಮಾನೋತ್ಸವ ವರ್ಷವನ್ನು ವಿಜಯದಶಮಿಯಂದು ಆಚರಿಸಿತು. ಶತಮಾನೋತ್ಸವದ ಅಂಗವಾಗಿ ಸಂಘವು ದೇಶದಾದ್ಯಂತ ವಿಜಯದಶಮಿ ಉತ್ಸವಗಳು, ಯುವ ಸಮಾವೇಶಗಳು, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನಗಳು, ಸಾಮಾಜಿಕ ಸದ್ಭಾವನಾ ಸಮಾವೇಶಗಳು ಹಾಗೂ ಪ್ರಮುಖ ನಾಗರಿಕರ ವಿಚಾರಗೋಷ್ಠಿಗಳು ಮುಂತಾದ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ, ಸಂಘದ ಶತಮಾನೋತ್ಸವ ಕಾರ್ಯಕ್ರಮಗಳ ಭಾಗವಾಗಿ ನವೆಂಬರ್ 8 ಮತ್ತು 9ರಂದು ಬೆಂಗಳೂರಿನಲ್ಲಿ ಉಪನ್ಯಾಸ ಸರಣಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಡಾ. ಮೋಹನ್ ಭಾಗವತ್ ಅವರು ಉಪನ್ಯಾಸ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa