
ಕೊಪ್ಪಳ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯ ಮಾರ್ಗದಾಳುಗಳು ಅಥವಾ ನಿರ್ವಹಣಾ ಸಿಬ್ಬಂದಿಗೆ ವಿದ್ಯುತ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ತರಬೇತಿ ಕಾರ್ಯಾಗಾರವನ್ನು ನವೆಂಬರ್ 10 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಉದ್ಘಾಟಿಸುವರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು. ಕಾರ್ಯಾಗಾರದಲ್ಲಿ ಸುಮಾರು 260 ಮಾರ್ಗದಾಳುಗಳು ಪಾಲ್ಗೊಳ್ಳುವರು ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ(ವಿ) ಮೋಟ್ಲಾ ನಾಯ್ಕ ಎಂ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್