
ಮೈಸೂರು, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಮತ್ತೊಬ್ಬ ರೈತನ ಪ್ರಾಣ ಕಸಿದಿದೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದ ದಂಡನಾಯ್ಕ ಅಲಿಯಾಸ್ ಸ್ವಾಮಿ ಎಂಬ ರೈತನ ಮೇಲೆ ಇಂದು ಬೆಳಿಗ್ಗೆ ಹುಲಿ ದಾಳಿ ನಡೆಸಿದ್ದು, ಸ್ಥಳದಲ್ಲೇ ರೈತ ಸಾವನ್ನಪ್ಪಿದ್ದಾರೆ.
ಈ ಘಟನೆ ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಪದೇ ಪದೇ ನಡೆಯುತ್ತಿರುವ ಹುಲಿ ದಾಳಿಗಳಿಂದ ಸರಗೂರು, ನಂಜನಗೂಡು ತಾಲೂಕುಗಳ ಕಾಡಂಚಿನ ಗ್ರಾಮಗಳು ಭೀತಿಗೆ ಒಳಗಾಗಿವೆ. ರೈತರು ಹೊಲಕ್ಕೆ ಹೋಗುವುದಕ್ಕೂ ಹೆದರುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ನಂಜನಗೂಡು ತಾಲೂಕಿನ ನೇರಳೆ ಗ್ರಾಮದಲ್ಲಿ ದನ ಕಾಯುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಲು ಮುಂದಾದ ಘಟನೆ ನಡೆದಿತ್ತು. ಅದೃಷ್ಟವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa