ನಾಳೆ ಜಿಲ್ಲಾಸ್ಪತ್ರೆಯಲ್ಲಿ ದಾತ್ರಿ ಸಮಗ್ರ ಹಾಲುಣಿಸುವಿಕೆ ನಿರ್ವಹಣಾ ಕೇಂದ್ರದ ಉದ್ಘಾಟನೆ
ವಿಜಯಪುರ, 07 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಸ್ಪತ್ರೆಯ ಎಂಸಿಎಚ್ ವಿಭಾಗದಲ್ಲಿ ನವೆಂಬರ್ 8ರಂದು ದಾತ್ರಿ ಸಮಗ್ರ ಹಾಲುಣಿಸುವಿಕೆಯ ನಿರ್ವಹಣಾ ಕೇಂದ್ರ ಹಾಗೂ ಮದರ್ ಮಿಲ್ಕ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈ
ನಾಳೆ ಜಿಲ್ಲಾಸ್ಪತ್ರೆಯಲ್ಲಿ ದಾತ್ರಿ ಸಮಗ್ರ ಹಾಲುಣಿಸುವಿಕೆ ನಿರ್ವಹಣಾ ಕೇಂದ್ರದ ಉದ್ಘಾಟನೆ


ವಿಜಯಪುರ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಸ್ಪತ್ರೆಯ ಎಂಸಿಎಚ್ ವಿಭಾಗದಲ್ಲಿ ನವೆಂಬರ್ 8ರಂದು ದಾತ್ರಿ ಸಮಗ್ರ ಹಾಲುಣಿಸುವಿಕೆಯ ನಿರ್ವಹಣಾ ಕೇಂದ್ರ ಹಾಗೂ ಮದರ್ ಮಿಲ್ಕ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.

ಯುನಿಸೆಫ್ ಅಧಿಕಾರಿಗಳು, ಎನ್.ಎಚ್.ಎಂ ಅಭಿಯಾನದ ನಿರ್ದೇಶಕರು, ಜಿಲ್ಲಾಧಿಕಾರಿ ಡಾ.ಆನಂದ ಕೆ,ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ಹಾಗೂ ಹೈದ್ರಾಬಾದಿನ ಸುಶೇನಾ ಹೆಲ್ತ ಫೌಂಡೇಶನ್,ನವದೆಹಲಿಯ ಆಶ್ರಯ ಹಸ್ತಾ ಟ್ರಸ್ಟ ನಿರ್ದೇಶಕರು ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande