ವಂದೇ ಮಾತರಂ ಪರಿಕಲ್ಪನೆಯನ್ನು ಇಂದು ಭಾರತ ಸಾಕಾರಗೊಳಿಸುತ್ತಿದೆ : ಪ್ರಧಾನಿ ಮೋದಿ
ನವದೆಹಲಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಗೀತೆ ವಂದೇ ಮಾತರಂ ರಚನೆಯಾಗಿ 150 ವರ್ಷಗಳು ಪೂರ್ತಿಯಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯಲ್ಲಿ ನಡೆದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡಿ, “ವಂದೇ ಮಾತರಂ ದೇಶದ ಸ್ವಾತಂತ್ರ್ಯದ ಗೀತೆ ಮಾತ್ರವಲ್ಲದೆ,
Pm


ನವದೆಹಲಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಗೀತೆ ವಂದೇ ಮಾತರಂ ರಚನೆಯಾಗಿ 150 ವರ್ಷಗಳು ಪೂರ್ತಿಯಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯಲ್ಲಿ ನಡೆದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡಿ, “ವಂದೇ ಮಾತರಂ ದೇಶದ ಸ್ವಾತಂತ್ರ್ಯದ ಗೀತೆ ಮಾತ್ರವಲ್ಲದೆ, ಕೋಟ್ಯಂತರ ಭಾರತೀಯರ ಮನಸ್ಸಿನಲ್ಲಿ ಸಮೃದ್ಧ ಮತ್ತು ಶಕ್ತಿಯುತ ಭಾರತದ ಕನಸನ್ನು ಸಾಕಾರಗೊಳಿಸುವ ಪ್ರೇರಣಾ ಗೀತೆ” ಎಂದರು.

ಈ ಗೀತೆಯಲ್ಲಿ ಭಾರತ ಮಾತೆಯನ್ನು ದೇವಿಯ ಮೂರು ರೂಪಗಳಾದ ಸರಸ್ವತಿ, ಲಕ್ಷ್ಮಿ ಮತ್ತು ದುರ್ಗೆಯ ರೂಪದಲ್ಲಿ ಚಿತ್ರಿಸಲಾಗಿದೆ. ಇಂದು ಭಾರತವು ಜ್ಞಾನ (ಸರಸ್ವತಿ), ಸಮೃದ್ಧಿ (ಲಕ್ಷ್ಮಿ) ಮತ್ತು ಶಕ್ತಿ (ದುರ್ಗೆ) ಎಂಬ ಮೂರು ಆಯಾಮಗಳಲ್ಲಿ ಪ್ರಗತಿ ಸಾಧಿಸುವ ಮೂಲಕ ಈ ಪರಿಕಲ್ಪನೆಯನ್ನು ಸಾಕಾರಗೊಳಿಸುತ್ತಿದೆ ಎಂದರು.

ವಂದೇ ಮಾತರಂ ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸ ನೀಡುತ್ತದೆ, ಭವಿಷ್ಯಕ್ಕೆ ಹೊಸ ಧೈರ್ಯ ತುಂಬುತ್ತದೆ ಮತ್ತು ಸಾಧಿಸಲಾಗದ ಗುರಿಯೇ ಇಲ್ಲ ಎಂಬ ಸಂದೇಶ ನೀಡುತ್ತದೆ ಎಂದು ಹೇಳಿದರು.

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಅವರು ವರ್ಷಪೂರ್ತಿ ನಡೆಯಲಿರುವ ವಂದೇ ಮಾತರಂ ಸ್ಮರಣೋತ್ಸವ ಕಾರ್ಯಕ್ರಮಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮಗಳು ನವೆಂಬರ್ 7, 2025 ರಿಂದ ನವೆಂಬರ್ 7, 2026ರವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ಅವರು ಸ್ಮರಣಾರ್ಥ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತವು ಮಹತ್ತರ ಪ್ರಗತಿ ಸಾಧಿಸಿದೆ ಇಂದಿನ ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಭಯೋತ್ಪಾದನೆಯಂತಹ ಸವಾಲುಗಳನ್ನು ಎದುರಿಸಲು ಭಾರತ ಶಕ್ತಿಯುತ ರಾಷ್ಟ್ರವಾಗಿದೆ ಎಂಬುದನ್ನು ಇಡೀ ಜಗತ್ತು ಕಂಡಿದೆ ಎಂದು ಪ್ರಧಾನಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande