
ವಿಜಯಪುರ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್‌ದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೂ
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು.
ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಹಾಗೂ ಹೊರಡಿಸುತ್ತಿರುವ ಆದೇಶವನ್ನು ಹಿಂಪಡೆಯಬೇಕು. ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರು ಹಾಗೂ ಡಿ ಗ್ರುಪ್ ನೌಕರರನ್ನು ಭರ್ತಿ ಮಾಡಬೇಕು. ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನಿಶ್ಚಿತ ಪಿಂಚಣಿ ಒದಗಿಸಬೇಕು ಸೇರಿದಂತೆ 12 ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande