
ಕೊಪ್ಪಳ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ, ಉತ್ತಮವಾಗಿ ಸಾಧನೆ ಮಾಡಿದಂತಹ ಕ್ರೀಡಾಪಟುಗಳ ವಿವರಗಳನ್ನೊಳಗೊಂಡಂತೆ ಕಿರುಹೊತ್ತಿಗೆ ಪುಸ್ತಕವನ್ನು ರಚಿಸಬೇಕಾಗಿರುವುದರಿಂದ ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಮಾಹಿತಿಯನ್ನು ಒದಗಿಸುವಂತೆ ತಿಳಿಸಿದೆ.
ಸಾಧನೆ ಮಾಡಿದ ಕ್ರೀಡಾಪಟುಗಳು ಸಂಪೂರ್ಣ ವಿವರಗಳನ್ನು ಕ್ಯೂ.ಆರ್.ಕೋಡ್ ಮುಖಾಂತರ ಅಥವಾ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:08539-230120 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್