
ವಿಜಯಪುರ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರತಿ ಟನ್ ಕಬ್ಬಿಗೆ 3500 ದರ ನಿಗದಿ ಮಾಡಬೇಕೆಂದು ಒತ್ತಾಯಿಸಿ ವಿಜಯಪುರ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ.
ಕಬ್ಬು ಬೆಳೆಗಾರರು ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಬಂದ್ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬಿಗೆ ಧರಣಿ ನಿಗದಿ ಮಾಡಿದ ಬಳಕೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಕಬ್ಬಿಗೆ ಬೆಲೆ ನಿಗದಿಗೆ ಒತ್ತಾಯಿಸಿ ಇಂದು ಇಂಡಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಇಂಡಿ ಪಟ್ಟಣ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸರ್ಕಾರಿ ಬಸ್‌ಗಳ ಸೇವೆ ಸ್ಥಗಿತಗೊಂಡಿದೆ. ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ವ್ಯಾಪಾರಸ್ಥರು ಬೆಂಬಲ ನೀಡಿದ್ದಾರೆ.
ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿದೆ.
ಹಿರೇಬೇವನೂರು ಗ್ರಾಮದ ರೈತ ಅದೃಷ್ಯಪ್ಪ ವಾಲಿಕಾರ ಬಾರೋಕೋಲಿನಿಂದ ಹೊಡೆದುಕೊಂಡು ಹೋರಾಟ ಮಾಡಿದರು. ಕಬ್ಬಿಗೆ ಸರ್ಕಾರ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande